ಕೋಲ್ಕತ್ತಾ: ಇಲ್ಲಿನ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು (RG Kar Medical College) ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಕೇಂದ್ರ ತನಿಖಾ ದಳವು (CBI) ಕೋಲ್ಕತ್ತಾ ಹೈಕೋರ್ಟ್‌ಗೆ (Calcutta High Court) ವರದಿ ಸಲ್ಲಿಸಿದೆ.
ಕೋಲ್ಕತ್ತಾದ ಹೈಕೋರ್ಟ್‌ನ ಏಕಸದಸ್ಯ ಪೀಠವು ಹಿಂದಿನ ವಿಚಾರಣೆಯ ಸಮಯದಲ್ಲಿ ಟ್ರೈನಿ ವೈದ್ಯೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆಯೇ ಎಂದು ಸ್ಪಷ್ಟಪಡಿಸಲು ಸಿಬಿಐಗೆ ತಿಳಿಸಿತ್ತು. ಈ ಪ್ರಕರಣದ ಆರೋಪಿ ಸಂಜಯ್ ರಾಯ್‌ಗೆ ಕೋರ್ಟ್ ಈ ಹಿಂದೆಯೇ ಜೀವಾವಧಿ ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: Myanmar Earthquake: ಮ್ಯಾನ್ಮಾರ್‌ನಲ್ಲಿ ಪ್ರಬಲ ಭೂಕಂಪಕ್ಕೆ 60 ಸಾವು, 250 ಮಂದಿಗೆ ಗಾಯ
ನ್ಯಾ. ತೀರ್ಥಂಕರ ಘೋಷ್ ಅವರು, ಅತ್ಯಾಚಾರ ಪ್ರಕರಣದಲ್ಲಿ ಒಬ್ಬರು ಅಥವಾ ಹೆಚ್ಚಿನವರು ಭಾಗಿಯಾಗಿದ್ದಾರೆಯೇ ಎಂದು ತನಿಖೆ ಮಾಡಲು ಸಿಬಿಐಗೆ ಸೂಚಿಸಿದ್ದರು. ಇದೀಗ ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಸಿಬಿಐಯು, ಟ್ರೈನಿ ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: Photo Gallary: ಮ್ಯಾನ್ಮಾರ್, ಥೈಲ್ಯಾಂಡ್‌ನಲ್ಲಿ ಡೆಡ್ಲಿ ಭೂಕಂಪ – ಭೀಕರ ದೃಶ್ಯಗಳನ್ನು ಫೋಟೊಗಳಲ್ಲಿ ನೋಡಿ..
ಮೃತ ವೈದ್ಯೆಯ ಪೋಷಕರು, ಸಿಬಿಐಯು ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಿಲ್ಲ. ಸರಿಯಾಗಿ ತನಿಖೆ ಮಾಡಿದ್ದರೆ, ಇನ್ನೂ ಹಲವರ ಬಂಧನವಾಗಿ ಶಿಕ್ಷೆಯಾಗುತ್ತಿತ್ತು ಎಂದು ಆರೋಪಿಸಿದ್ದರು. ಇದನ್ನೂ ಓದಿ: ವಿಜಯಲಕ್ಷ್ಮಿ ಅಕ್ಕ ಹೋರಾಟ ನೋಡಿ ಅವರೊಂದಿಗೆ ನಿಲ್ಲಬೇಕು ಅನ್ನಿಸಿತು: ದರ್ಶನ್ ಕೇಸ್ ಬಗ್ಗೆ ಧನ್ವೀರ್ ಮಾತು
2024 ಆಗಸ್ಟ್ 9ರಂದು ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯ ಸೆಮಿನಾರ್ ಹಾಲ್‌ನ ನಾಲ್ಕನೇ ಮಹಡಿಯಲ್ಲಿ 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆ ಅರೆಬೆತ್ತಲೆ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಸಂತ್ರಸ್ತೆ ಲೈಂಗಿಕ ದೌರ್ಜನ್ಯದಿಂದಾಗಿ ಬಾಹ್ಯ ಮತ್ತು ಆಂತರಿಕ ಗಾಯ ಮಾಡಿ ಕೊಲೆ ಮಾಡಲಾಗಿದೆ ಎಂದು ತಿಳಿದಿತ್ತು.