– ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಕೋಲ್ಕತ್ತಾ: ಈ ಬಾರಿ ಕೋಲ್ಕತ್ತಾದಲ್ಲಿ (Kolkata) ನಡೆಯಲಿರುವ 2026ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ (International Yoga Day) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾಗವಹಿಸಲಿದ್ದಾರೆ.
ಜೂ.21 ಕೋಲ್ಕತ್ತಾದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ಕೇಂದ್ರ ಆಯುಷ್ ಸಚಿವ ಪ್ರತಾಪ್‌ರಾವ್ ಜಾಧವ್ ತಿಳಿಸಿದ್ದಾರೆ. ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಈ ಬಾರಿಯ ಥೀಮ್ ಆಗಿದೆ. ದೈಹಿಕ ಆರೋಗ್ಯ, ಮಾನಸಿಕ ಯೋಗಕ್ಷೇಮ, ಆರೋಗ್ಯಕರ ವೃದ್ಧಾಪ್ಯವನ್ನು ಉತ್ತೇಜಿಸುವಲ್ಲಿ ಯೋಗದ ಪಾತ್ರ ಮಹತ್ವದ್ದು ಎಂಬ ಆಶಯ ಹೊಂದಲಾಗಿದೆ. ಇದನ್ನೂ ಓದಿ: CBSE ಆನ್-ಸ್ಕ್ರೀನ್ ಮಾರ್ಕಿಂಗ್ ವಿವಾದ – ಹೊಣೆ ಹೊತ್ತ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ಆಯುಷ್ ಸಚಿವಾಲಯದ ಅಧೀನದಲ್ಲಿರುವ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ (MDNIY) ಆಯೋಜಿಸಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಯೋಗ ಉತ್ಸಾಹಿಗಳು ಭಾಗವಹಿಸಲಿದ್ದಾರೆ.
ಶ್ರೀಮಂತ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಹೊಂದಿರುವ ಖಜುರಾಹೊ, ಭಾರತದ ಪ್ರಾಚೀನ ಸಂಪ್ರದಾಯಗಳು ಮತ್ತು ಕ್ಷೇಮ ಪದ್ಧತಿಗಳ ನಡುವಿನ ಸಾಮರಸ್ಯವನ್ನು ಪ್ರತಿನಿಧಿಸುತ್ತದೆ ಎಂದು ಜಾಧವ್ ತಿಳಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ತಿಳಿಸಿದ ಮೋದಿ, ರಾಷ್ಟ್ರಪತಿ
ಯೋಗವು ದೈನಂದಿನ ಜೀವನದ ಒಂದು ಭಾಗವಾಗಬೇಕು. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯಡಿಯಲ್ಲಿ ಆಯುಷ್ ಸಚಿವಾಲಯವು ನಿರಂತರ ಸಂಪರ್ಕ ಮತ್ತು ಸಾರ್ವಜನಿಕ ಭಾಗವಹಿಸುವಿಕೆಯ ಮೂಲಕ ಪ್ರತಿಯೊಂದು ಹಳ್ಳಿ, ಮನೆ, ಶಾಲೆ, ಕಚೇರಿ ಮತ್ತು ಸಮುದಾಯಕ್ಕೆ ಯೋಗವನ್ನು ಕೊಂಡೊಯ್ಯಲು ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಸಚಿವರು ಬಣ್ಣಿಸಿದ್ದಾರೆ.
