ಕೋಲ್ಕತ್ತಾ: ಟ್ರೈನಿ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ವಿರುದ್ಧ ಪ್ರತಿಭಟನಾನಿರತ ವೈದ್ಯರು ಇಟ್ಟ ಬೇಡಿಕೆಗೆ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಒಪ್ಪಿಗೆ ಸೂಚಿಸಿದ್ದಾರೆ. ಅದರಂತೆ ಕೋಲ್ಕತ್ತಾದ ಉನ್ನತ ಪೊಲೀಸ್ ಅಧಿಕಾರಿ ಹಾಗೂ ಇಬ್ಬರು ಆರೋಗ್ಯ ಅಧಿಕಾರಿಗಳ ವಜಾ ಮಾಡುವುದಾಗಿ ಘೋಷಿಸಿದ್ದಾರೆ.
ಪ್ರತಿಭಟನಾನಿರತ ವೈದ್ಯರೊಂದಿಗೆ ಮಮತಾ ಬ್ಯಾನರ್ಜಿ ಸಭೆ ನಡೆಸಿದರು. ಸಭೆಯಲ್ಲಿ ಐದು ಬೇಡಿಕೆಗಳ ಪೈಕಿ ಮೂರನ್ನು ಈಡೇರಿಸುವುದಾಗಿ ಭರವಸೆ ನೀಡಿದರು. ಬಿಕ್ಕಟ್ಟು ಬಗೆಹರಿದಿದ್ದರೂ ಇಂದು ಬೆಳಗ್ಗೆ ಔಪಚಾರಿಕ ಆದೇಶ ಹೊರಡಿಸುವವರೆಗೆ ಪ್ರತಿಭಟನೆ ಮುಂದುವರಿಯುವ ನಿರೀಕ್ಷೆ ಇದೆ. ಇದನ್ನೂ ಓದಿ: ಕೋಲಾರ| ಈದ್ ಮೆರವಣಿಗೆ ವೇಳೆ 2 ಗುಂಪಿನ ನಡುವೆ ಘರ್ಷಣೆ – 5ಕ್ಕೂ ಹೆಚ್ಚು ಮಂದಿಗೆ ಗಾಯ
- Advertisement
ವೈದ್ಯರ ಬೇಡಿಕೆಗಳಲ್ಲಿ 99% ಒಪ್ಪಿಕೊಂಡಿದ್ದೇನೆ. ಏಕೆಂದರೆ ಅವರೆಲ್ಲ ನನ್ನ ಸೋದರ ಸಂಬಂಧಿಗಳಿದ್ದಂತೆ. ಎಲ್ಲರೂ ಹೋಗಿ ಚರ್ಚಿಸಿ ನಂತರ ಕದನ ವಿರಾಮವನ್ನು ಹಿಂತೆಗೆದುಕೊಳ್ಳುವ ಬಗ್ಗೆ ನಿರ್ಧರಿಸುತ್ತಾರೆ ಎಂದು ನನಗೆ ತಿಳಿದಿದೆ. ಆದರೆ ನಾನು ರೋಗಿಗಳ ಸ್ಥಿತಿಯನ್ನು ಉಲ್ಲೇಖಿಸಿ, ವಿಶೇಷವಾಗಿ ಕೆಲವು ಜಿಲ್ಲೆಗಳಲ್ಲಿನ ಪ್ರವಾಹವನ್ನು ಗಮನದಲ್ಲಿಟ್ಟುಕೊಂಡು ಪ್ರತಿಭಟನೆ ಕೈಬಿಡಲು ಅವರಿಗೆ ಮನವಿ ಮಾಡಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.
- Advertisement
ಮಮತಾ ಬ್ಯಾನರ್ಜಿ ಅವರು ಆಸ್ಪತ್ರೆಯ ಮೂಲಸೌಕರ್ಯಗಳ ಉನ್ನತೀಕರಣದ ಬೇಡಿಕೆಗಳನ್ನು ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ 100 ಕೋಟಿ ರೂ. ಮೀಸಲಿಡಲಾಗಿದೆ. ಇದನ್ನೂ ಓದಿ: ಮಂಗಳೂರು, ನಾಗಮಂಗಲ ಎಲ್ಲಾ ಕಡೆ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದಾರೆ: ದಿನೇಶ್ ಗುಂಡೂರಾವ್