ಚಾಮರಾಜನಗರ: ಕೊಳ್ಳೇಗಾಲದ (Kollegala) ಮಾಜಿ ಶಾಸಕ ಎಸ್ ಜಯಣ್ಣ (S Jayanna) ಹೃದಯಾಘಾತದಿಂದ (Heart Attack) ಮಂಗಳವಾರ ನಿಧನರಾಗಿದ್ದಾರೆ.
ಬುಧವಾರ ಗೃಹ ಪ್ರವೇಶ ಹಿನ್ನೆಲೆ ಆಹ್ವಾನ ಪತ್ರಿಕೆ ಕೊಡಲು ಮೈಸೂರಿಗೆ (Mysuru) ತೆರಳುತ್ತಿದ್ದ ವೇಳೆ ಕೋಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಬಳಿ ಜಯಣ್ಣ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕಾರಿನಲ್ಲಿ ಹೋಗುತ್ತಿದ್ದ ವೇಳೆ ಏಕಾಏಕಿ ಕೆಮ್ಮು ಹಾಗೂ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ಕರೆತರುವ ಮುನ್ನ ಮಾರ್ಗಮಧ್ಯೆ ಜಯಣ್ಣ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ರಾಯಚೂರಿನಲ್ಲಿ ಉದ್ಘಾಟಿಸಿದ್ದ ಕೃಷ್ಣ
Advertisement
Advertisement
ಸಣ್ಣಯ್ಯ, ಪುಟ್ಟನಂಜಮ್ಮ ದಂಪತಿಯ ಸುಪುತ್ರನಾದ ಜಯಣ್ಣ 1952ರ ಸೆ.9ರಂದು ಜನಿಸಿದರು. 72 ವಯಸ್ಸಿನ ಜಯಣ್ಣ ರಾಜ್ಯ ಸರ್ಕಾರ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದರು. ಜಯಣ್ಣ ಎರಡು ಬಾರಿ ಶಾಸಕರಾಗಿದ್ದರು. ಅನಾರೋಗ್ಯದ ಹಿನ್ನೆಲೆ 2018ರಲ್ಲಿ ಟಿಕೆಟ್ ಕೊಟ್ಟಿರಲಿಲ್ಲ. 1994ರಲ್ಲಿ ಜೆಡಿಎಸ್‌ನಿಂದ ಹಾಗೂ 2013ರಲ್ಲಿ ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೇ ಸಿಎಂ ಸಿದ್ದರಾಮಯ್ಯನವರ ಆಪ್ತರಾಗಿದ್ದರು. ಜಯಣ್ಣ ಅವರ ಅಂತ್ಯಕ್ರಿಯೆ ಬುಧವಾರ ಮಾಂಬಳ್ಳಿ ಗ್ರಾಮದಲ್ಲಿ ನಡೆಯಲಿದೆ. ಇದನ್ನೂ ಓದಿ: ಭಾರತ ಒಬ್ಬ ದೂರದೃಷ್ಟಿ ನಾಯಕನನ್ನು ಕಳೆದುಕೊಂಡಿದೆ – ಪ್ರಹ್ಲಾದ್ ಜೋಶಿ ಸಂತಾಪ
Advertisement