ಚಾಮರಾಜನಗರ: ಕೊಳ್ಳೇಗಾಲದ (Kollegala) ಸರ್ಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಮಿಳುನಾಡು ಮೂಲದ ಡಾ. ಸಿಂಧುಜಾ (28) ಶುಕ್ರವಾರ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ.
ಡಾ. ಸಿಂಧುಜಾ ಅವರು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರಾಗಿ ಕಳೆದ ಒಂದು ವರ್ಷದಿಂದ ಕೆಲಸ ಮಾಡುತ್ತಿದ್ದರು. ಮಹದೇಶ್ವರ ಕಾಲೇಜು ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಶುಕ್ರವಾರ ಮನೆಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಗರ್ಭಿಣಿಯಾಗಿದ್ದಕ್ಕೆ ಅವಿವಾಹಿತೆಗೆ ಬೆಂಕಿ ಹಚ್ಚಿದ ಕುಟುಂಬಸ್ಥರು
Advertisement
Advertisement
ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವೈದ್ಯೆಯ ಶವದ ಬಳಿ ಸಿರೆಂಜ್ ಪತ್ತೆಯಾಗಿದೆ. ಜನವರಿ 2 ಕ್ಕೆ ಡಾ. ಸಿಂಧುಜಾ ಮದುವೆ ನಿಶ್ಚಯವಾಗಿತ್ತು. ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
ತಮಿಳುನಾಡಿನವರಾದ ಸಿಂಧುಜಾ ಎಂಬಿಬಿಎಸ್ ಕೋರ್ಸ್ ಮಾಡಿದ್ದರು. ಬಳಿಕ ಸ್ನಾತಕೋತ್ತರ ಪದವಿಗೆ ಸೇರಿದ್ದರು. ಸ್ನಾತಕೋತ್ತರ ಪದವಿ ಶಿಕ್ಷಣದ ಭಾಗವಾಗಿ ಅವರು ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಕಾರು, ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ – ತಂದೆ, ಮಗ ಸಾವು
Advertisement
ಆಸ್ಪತ್ರೆಯಲ್ಲಿ ಎಲ್ಲ ವೈದ್ಯರು ಹಾಗೂ ಸಿಬ್ಬಂದಿ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಸಿಂಧುಜಾ, ನಿನ್ನೆ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗಿದ್ದರು.
Web Stories