ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವಟ್ಟರ್ ನಲ್ಲಿ ಪ್ರತಿಕ್ರಿಯಿಸಿರೋ ಅವರು, ಭಕ್ತಾದಿಗಳು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹುಂಡಿಗೆ ಹಾಕಿದ ಹಣದಿಂದ ಕಲ್ಲಡ್ಕದ ಶ್ರೀರಾಮ ವಿದ್ಯಾಲಯದ ಬಡ ಮಕ್ಕಳಿಗೆ ಬರುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಕಿತ್ತುಕೊಂಡ ಕಾಂಗ್ರೆಸ್ ಸರ್ಕಾರ, ಅದೇ ದುಡ್ಡಲ್ಲಿ ರಾಜಕೀಯ ಕಾರ್ಯಕ್ರಮದ ಊಟಕ್ಕೆ ಉಪಯೋಗಿಸಿದ್ದು ವಿಪರ್ಯಾಸ. ಅದಕ್ಕೆ ಸಮರ್ಥನೆ ಬೇರೆ ಕೇಡು ಅಂತ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಅಂದು ಕಲ್ಲಡ್ಕ ಶಾಲೆ ಮಕ್ಕಳಿಗೆ ಬಿಸಿಯೂಟ ಕಟ್- ಈಗ ಕಾಂಗ್ರೆಸ್ ಸಮಾವೇಶಕ್ಕೆ ಕೊಲ್ಲೂರು ದೇಗುಲದ ಆಹಾರ, ಜನರ ಆಕ್ರೋಶ
Advertisement
Advertisement
ಜಿಲ್ಲೆಯ ಬೈಂದೂರಿನಲ್ಲಿ ಸೋಮವಾರ ನಡೆದಿದ್ದ ಸಾಧನಾ ಸಮಾವೇಶಕ್ಕೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು. ಇದಕ್ಕೆ ರಾಜ್ಯಾದ್ಯಂತ ಭಾರೀ ವಿವಾದ ವ್ಯಕ್ತವಾಗಿದ್ದು, ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿತ್ತು. ಇದನ್ನೂ ಓದಿ: ಊಟ ಎಲ್ಲಿಂದ ಬಂದ್ರೂ ಊಟನೇ ಅಲ್ವಾ: ಸಿಎಂ ಸಮರ್ಥನೆ
Advertisement
ದೇವಸ್ಥಾನದ ಊಟವನ್ನು ಸಮಾವೇಶಕ್ಕೆ ನೀಡಬಹುದು. ಇದು ದೇವಸ್ಥಾನದ ಪ್ರಸಾದ. ಸರ್ಕಾರಿ ಕಾರ್ಯಕ್ರಮಕ್ಕೆ ನೀಡಲು ಅವಕಾಶ ಇದೆ. ಆದಾಗ್ಯೂ ಹೊರೆಯಾಗಬಾರದೆಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಎರಡು ದಿನದ ಹಿಂದೆಯೇ 1 ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿತ್ತು. ಇದನ್ನೂ ಓದಿ: ಬೂಟಾಟಿಕೆಗೆ ಖಾವಿ ಹಾಕ್ತಾನೆ, ಯೋಗಿ ಯಾವತ್ತಾದ್ರೂ ಸಗಣಿ ಹೊತ್ತಿದ್ದಾನಾ: ಸಿಎಂ ಸಿದ್ದರಾಮಯ್ಯ
Advertisement