ಕೊಪ್ಪಳ: ಬಲ್ಡೋಟಾ ಫ್ಯಾಕ್ಟರಿ (Baldota factory) ಸ್ಥಾಪನೆ ವಿರೋಧಿಸಿ ಕೊಪ್ಪಳದಲ್ಲಿ (Koppal) ಇಂದು ಸ್ವಯಂಪ್ರೇರಿತ ಬಂದ್‌ಗೆ ಪರಿಸರ ಸಂರಕ್ಷಣಾ ಸಮಿತಿ ಕರೆ ನೀಡಿದೆ. ಬಂದ್ ಹಿನ್ನೆಲೆ ಕೊಪ್ಪಳ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಕೊಪ್ಪಳ ಬಿಇಓ ಶಂಕರಯ್ಯ (Shankarayya) ರಜೆ ಘೋಷಿಸಿದ್ದಾರೆ.
ನಗರದ 130 ವಿವಿಧ ಸಂಘ ಸಂಸ್ಥೆಗಳು ಬಂದ್‌ಗೆ ಬೆಂಬಲ ನೀಡಿದ್ದು, ಕೊಪ್ಪಳ ಗವಿಮಠದಿಂದ ತಾಲೂಕು ಕ್ರೀಡಾಂಗಣವರಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಹೋರಾಟದಲ್ಲಿ ಸಾವಿರಾರು ಜನರು ಭಾಗಿಯಾಗೋ ಸಾಧ್ಯತೆಗಳಿವೆ. ಇದನ್ನೂ ಓದಿ: ಬ್ಯಾಂಕಲ್ಲಿ 5 ಲಕ್ಷಕ್ಕಿಂತ ಹೆಚ್ಚು ಹಣ ಇಟ್ಟರೆ ಸೇಫ್ ಆಗಿರುತ್ತಾ, ಇಲ್ವಾ? – ಏನಿದು ಠೇವಣಿ ವಿಮೆ?
Advertisement
Advertisement
ಕೊಪ್ಪಳ ನಗರ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಬಲ್ಡೋಟಾ ಸ್ಟೀಲ್ ಫ್ಯಾಕ್ಟರಿಯು ಆರಂಭದಿಂದ ಕೊಪ್ಪಳ ಜನರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪರಿಸರದಲ್ಲಿ ಹೆಚ್ಚಿನ ಮಾಲಿನ್ಯ ಉಂಟುಮಾಡುತ್ತದೆ, ಈ ಹಿನ್ನೆಲೆ ನಗರಕ್ಕೆ ಹೊಂದಿಕೊಂಡು ಫ್ಯಾಕ್ಟರಿ ಬೇಡ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಇದನ್ನೂ ಓದಿ: ಮಹಾ ಕುಂಭಮೇಳಕ್ಕೆ ತೆರಳಿದ್ದ 6 ಮಂದಿ ಸಾವು – ಇಂದು ಬೀದರ್‌ಗೆ ಮೃತದೇಹ ರವಾನೆ
Advertisement
ಕೊಪ್ಪಳ ಬಂದ್ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದೆ. ಪ್ರತಿಭಟನಾಕಾರರು ಕೊಪ್ಪಳ ಬಸ್ ಡಿಪೋಗೆ ನುಗ್ಗಿ ವಾಗ್ವಾದ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆ ಬಂದ್ ಮಾಡುವಂತೆ ತಾಕೀತು ಮಾಡಿದ್ದು, ಡಿಪೋದಿಂದ ಬಸ್ ಹೊರಗೆ ಬಾರದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮಂಗಳೂರಿಗರಿಗೆ ತ್ಯಾಜ್ಯ, ಮೆಡಿಕಲ್ ವೇಸ್ಟ್ ಡಂಪಿಂಗ್ – ಕಂಟಕವಾಯ್ತಾ ನೆರೆಯ ಕೇರಳ..?