ಕೊಪ್ಪಳ: ಬಾಲಕೋಟ್ ದಾಳಿಯಲ್ಲಿ ಉಗ್ರರನ್ನು ಹತ್ಯೆ ಮಾಡಿದ್ದಕ್ಕೆ ಶವಗಳ ಸಾಕ್ಷಿ ಕೇಳಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ದೇಶ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬೆನ್ನಲ್ಲೆ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಇದೇ ಪ್ರಶ್ನೆ ಕೇಳಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.
ನಗರದಲ್ಲಿ ಮಾತನಾಡಿದ ಶಾಸಕರು, ಭಾರತೀಯ ವಾಯು ಪಡೆಯ ಯುದ್ಧ ವಿಮಾನಗಳು ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಯ ಮೇಲೆ 12 ನಿಮಿಷ ದಾಳಿ ಮಾಡಿವೆ. ಈ ದಾಳಿಯಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹೇಳುತ್ತಿದೆ. ಹಾಗಾದರೆ ಶವಗಳು ಎಲ್ಲಿವೆ? ಉಗ್ರ ಮೃತ ದೇಹವನ್ನು ಯಾರೂ ತೋರಿಸಿಲ್ಲ ಎಂದು ವೈಮಾನಿಕ ಯುದ್ಧಕ್ಕೆ ಸಾಕ್ಷಿ ಕೇಳಿದರು.
Advertisement
Advertisement
ಸೈನಿಕರ ಸಾವಿನ ಹೆಸರಲ್ಲಿ ರಾಜಕೀಯ ಮಾಡಬಾರದು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಏರ್ ಸ್ಟ್ರೈಕ್ ನಿಂದಾಗಿ ರಾಜ್ಯದಲ್ಲಿ 22 ಸೀಟ್ ಗೆಲ್ಲುತ್ತೇವೆ ಎಂದು ಹೇಳಿದ್ದ ದುರಂತ. ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ. ಸೈನಿಕ ಕುಟುಂಬ ಸಂಕಷ್ಟದಲ್ಲಿವೆ. ಆದರೆ ನಮ್ಮ ರಕ್ಷಿಸುವ ಯೋಧರ ಮೇಲೆ ರಾಜಕೀಯ ಮಾಡುವುದು ನಾಚಿಕೆಗೇಡಿತನ. ಕೋಮುಗಲಭೆ, ಗಲಾಟೆ ಮಾಡಸೋದು ಬಿಜೆಪಿಯ ಕೆಲಸ ಎಂದು ಕಿಡಿಕಾರಿದರು.
Advertisement
ದೀದಿ ಹೇಳಿದ್ದೇನು?:
ಏರ್ ಸ್ಟ್ರೈಕ್ ನಡೆದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಪಕ್ಷ ಸಭೆಯನ್ನು ಕರೆದಿಲ್ಲ. ಯಾವ ಪಕ್ಷಕ್ಕೂ ಮಾಹಿತಿ ನೀಡಿಲ್ಲ. ನಮಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು.
Advertisement
ಮಂಗಳವಾರದಂದು ಭಾರತೀಯ ವಾಯುಪಡೆ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಿ ಮಾಹಿತಿ ತಿಳಿಸಿಲ್ಲ. ಏರ್ ಸ್ಟ್ರೈಕ್ ಬಗ್ಗೆ ನಾವು ಮಾಧ್ಯಮಗಳನ್ನು ನೋಡಿ ಮಾಹಿತಿ ಪಡೆದಿದ್ದೇವೆ. ಯಾವ ಪ್ರದೇಶದ ಮೇಲೆ ದಾಳಿ ನಡೆಸಲಾಗಿದೆ. ಎಷ್ಟು ಬಾಂಬ್‍ಗಳನ್ನು ಉಗ್ರರ ಮೇಲೆ ಹಾಕಲಾಗಿದೆ. ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಕೇಂದ್ರ ಸರ್ಕಾರ ನಮಗೆ ನೀಡಬೇಕು ಎಂದು ಒತ್ತಾಯಿಸಿದ್ದರು.
ವಿದೇಶಿ ಮಾಧ್ಯಮಗಳಲ್ಲಿ ಏರ್‍ಸ್ಟ್ರೈಕ್ ನಲ್ಲಿ ಯಾರು ಮೃತಪಟ್ಟಿಲ್ಲ ಎಂದು ವರದಿ ಬರುತ್ತಿದೆ. ಇನ್ನೊಂದೆಡೆ ಕೆಲವು ಮಾಧ್ಯಮಗಳಲ್ಲಿ ಒಬ್ಬ ಮೃತ ಪಟ್ಟಿದ್ದಾನೆ ಎಂದು ಉಲ್ಲೇಖಿಸಲಾಗುತ್ತಿದೆ. ಇದರಲ್ಲಿ ಯಾವುದು ಸತ್ಯವೆಂದು ಕೇಂದ್ರ ಸರ್ಕಾರವೇ ತಿಳಿಸಬೇಕು. ನಮಗೆ ಈಗ ಏರ್ ಸ್ಟ್ರೈಕ್ ಬಗ್ಗೆ ಮಾಹಿತಿ ಕೊಡಿ ಎಂದು ಮಮತಾ ಬ್ಯಾನರ್ಜಿ ಕೇಳಿಕೊಂಡಿದ್ದರು.
https://www.youtube.com/watch?v=oseIZ5XYm4o
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv