ಕೊಪ್ಪಳ: ವಿದೇಶಿ ಮಹಿಳೆ ಮತ್ತು ಹೋಮ್‌ಸ್ಟೇ ಮಾಲೀಕೆ ಮೇಲೆ ಗ್ಯಾಂಗರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿ ಕೊಪ್ಪಳ (Koppal) ಗಂಗಾವತಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರೋಪಿಗಳಾದ ಮಲ್ಲೇಶ್, ಚೇತನಸಾಯಿ, ಶರಣಬಸವನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಸೋಮವಾರ ರಾತ್ರಿ ಮೂವರು ಆರೋಪಿಗಳನ್ನು ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಮೂವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಪೊಲೀಸರು ಕೊಪ್ಪಳ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರೋಧ
ಘಟನೆ ಏನು?
ಜಿಲ್ಲೆಯ ಗಂಗಾವತಿ (Gangavati) ತಾಲೂಕಿನ ಸಣಾಪೂರ ಕೆರೆ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆ ಪಕ್ಕದಲ್ಲಿ ಕುಳಿತುಕೊಂಡು ನಕ್ಷತ್ರ ವೀಕ್ಷಿಸುತ್ತಿದ್ದ 5 ಜನ ವಿದೇಶಿ ಪ್ರವಾಸಿಗರ ಮೇಲೆ ಗುರುವಾರ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಮೂವರು ಪುರುಷರನ್ನು ಕೆರೆಗೆ ತಳ್ಳಿ, ಇಬ್ಬರು ಮಹಿಳಾ ಪ್ರವಾಸಿಗರ ಮೇಲೆ ಅತ್ಯಾಚಾರವೆಸಗಿದ್ದರು. ಇದನ್ನೂ ಓದಿ: Hassan| ಅತ್ತೆ-ಸೊಸೆ ಜಗಳ; ಕೆರೆಗೆ ಹಾರಿ ತಾಯಿ, ಮಗ ಆತ್ಮಹತ್ಯೆ