ಕೊಪ್ಪಳ: ಗಂಗಾವತಿ ತಾಲೂಕಿನ ಮರಕುಂಬಿ (Marakumbi Case) ಗ್ರಾಮದಲ್ಲಿ 10 ವರ್ಷಗಳ ಹಿಂದೆ ನಡೆದಿದ್ದ ಜಾತಿ ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿ ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಅಸ್ವಸ್ಥಗೊಂಡು ಅಪರಾಧಿಯೊಬ್ಬರು ಸಾವಿಗೀಡಾಗಿರುವ ಘಟನೆ ನಡೆದಿದೆ.
ರಾಮಪ್ಪ ಲಕ್ಷ್ಮಣ ಭೋವಿ (44) ಸಾವಿಗೀಡಾದ ಅಪರಾಧಿ. ಗಲಾಟೆ ಪ್ರಕರಣ ಸಂಬಂಧ ಗುರುವಾರ ಕೊಪ್ಪಳ (Koppal) ನ್ಯಾಯಾಲಯದಲ್ಲಿ ಅಪರಾಧಿಗಳಿಗೆ ಶಿಕ್ಷೆ ಪ್ರಕಟಿಸಲಾಯಿತು. ಈ ವೇಳೆ ಅಸ್ವಸ್ಥಗೊಂಡಿದ್ದ ಅಪರಾಧಿ ರಾಮಪ್ಪನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇಂದು ಬೆಳಗ್ಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣದಲ್ಲಿ 98 ಜನಕ್ಕೆ ಜೀವಾವಧಿ – ಕೊಪ್ಪಳ ಜಿಲ್ಲಾ ಕೋರ್ಟ್ ಐತಿಹಾಸಿಕ ತೀರ್ಪು!
ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ 2014 ರ ಅ.28 ರಂದು ಸಂಘರ್ಷ ನಡೆದಿತ್ತು. ದಲಿತರು ಹಾಗೂ ಸವರ್ಣಿಯರ ನಡುವೆ ಗಲಾಟೆ ನಡೆದು ದಲಿತ ಕೇರಿಯ ಗುಡಿಸಲುಗಳಿಗೆ ಬೆಂಕಿ ಹಚ್ಚಲಾಗಿತ್ತು. ಹತ್ತು ವರ್ಷಗಳ ವಾದ ಆಲಿಸಿದ ನಂತರ ಈಚೆಗೆ ತೀರ್ಪು ಪ್ರಕಟಗೊಂಡಿತ್ತು.
ಗುರುವಾರ 101 ಜನ ಆರೋಪಿತರಿಗೆ ಕೋರ್ಟ್ ಶಿಕ್ಷೆ ವಿಧಿಸಿತು. ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಅಪರಾಧಿ ರಾಮಪ್ಪ ಅಸ್ವಸ್ಥಗೊಂಡಿದ್ದರು. ಇದನ್ನೂ ಓದಿ: ಕೊಪ್ಪಳದಲ್ಲಿ ಅಸ್ಪೃಶ್ಯತೆ ಆಚರಣೆಗೆ ಗಲಭೆ ಕೇಸ್: 101 ಜನರನ್ನು ತಪ್ಪಿತಸ್ಥರು ಎಂದು ತೀರ್ಪು ನೀಡಿದ ನ್ಯಾಯಾಲಯ