ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅನುಸರಿಸುತ್ತಿದ್ದಾರಾ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡಿದೆ.
ಪ್ರಧಾನಿ ಮೋದಿ 2019ರ ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕೇದಾರನಾಥ ದೇವಾಲಯ ಬಳಿಯ ಗುಹೆಯಲ್ಲಿ ಧ್ಯಾನ ಮಾಡಿದ್ದರು. ಈಗ ಸಚಿವ ಸುರೇಶ್ ಕುಮಾರ್ ಅವರು ಐತಿಹಾಸಿಕ ಹಿನ್ನೆಲೆಯುಳ್ಳ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತದ ಗುಹೆಯಲ್ಲಿ ಧ್ಯಾನ ಮಾಡಿದ್ದಾರೆ.
Advertisement
ಸುರೇಶ್ ಕುಮಾರ್ ಅವರು ಶಿಕ್ಷಕರ ದಿನಾಚರಣೆ ನಿಮಿತ್ತ ಶುಕ್ರವಾರ ಕೊಪ್ಪಳದ ಗಂಗಾವತಿಗೆ ಆಗಮಿಸಿದ್ದರು. ಕಾರ್ಯಕ್ರಮದ ಬಳಿಕ ಸಚಿವರು ನೇರವಾಗಿ ಅಂಜನಾದ್ರಿ ಪರ್ವತದ ಕಡೆ ಪ್ರಯಾಣ ಬೆಳೆಸಿದರು. ಸಚಿವರು ಜೈ ಶ್ರೀರಾಮ್ ಎನ್ನುತ್ತ 575 ಮೆಟ್ಟಿಲುಗಳನ್ನು ಹತ್ತಿ ಆಂಜನೇಯನ ದರ್ಶನ ಪಡೆದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಹೆಸರಲ್ಲಿ ಪೂಜೆ ಸಲ್ಲಿಸಿದರು. ನಂತರ ಅಂಜನಾದ್ರಿ ಬೆಟ್ಟದ ಮೇಲಿರುವ ಗುಹೆಯಲ್ಲಿ ಸುಮಾರು ಹತ್ತು ನಿಮಿಷಗಳ ಕಾಲ ಧ್ಯಾನ ಮಾಡಿದರು.
Advertisement
Advertisement
ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಇದು ಐತಿಹಾಸಿಕ ಹಿನ್ನಲೆಯುಳ್ಳ ಸ್ಥಳವಾಗಿದ್ದು. ಹನುಮನ ಜನ್ಮಸ್ಥಳ ಕಿಷ್ಕಿಂದಾ ಎಂದೇ ಕರೆಯಲ್ಪಡುತ್ತದೆ. ತುಂಗಭದ್ರಾ ತೀರದಲ್ಲಿರುವ ಅಂಜನಾದ್ರಿ ಬೆಟ್ಟ ಗುಹೆಯಲ್ಲಿ ಧ್ಯಾನ ಮಾಡಿದರೆ ಸಕಲವು ಒಳ್ಳೆದಾಗುತ್ತದೆ ಎನ್ನುವ ಪ್ರತೀತಿ ಇದೆ. ಈ ಹಿಂದೆ ನರೇಂದ್ರ ಮೋದಿ ಅವರು ಪ್ರಧಾನಿ ಆಗುವ ಮುನ್ನ ಅವರ ಪತ್ನಿ ಜಶೋಧಾ ಬೇನ್ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಇದು ಭಾರೀ ಸುದ್ದಿಯಾಗಿತ್ತು.
Advertisement
ಜಿಲ್ಲೆಗೆ ಬರುವ ಬಹುತೇಕ ರಾಜಕಾರಣಿಗಳು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯನ ದರ್ಶನ ಪಡೆಯುತ್ತಾರೆ. ಈ ಹಿಂದೆ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಭೇಟಿ ನೀಡಿ, ಆಂಜನೇಯನ ದರ್ಶನ ಪಡೆದಿದ್ದರು.