ಕೊಪ್ಪಳ: ಕೇದಾರನಾಥ (Kedarnath) ಯಾತ್ರೆಗೆ ತೆರಳಿದ್ದ ಕೊಪ್ಪಳದ (Koppal) ಅರ್ಚಕರೊಬ್ಬರು ಹೃದಯಾಘಾತದಿಂದ (Heart Attack) ಸಾವಿಗೀಡಾದ ಘಟನೆ ಋಷಿಕೇಶ್‍ನಲ್ಲಿ ನಡೆದಿದೆ.
ಮೃತರನ್ನು ಸಿದ್ದಯ್ಯ ಹಿರೇಮಠ (32) ಎಂದು ಗುರುತಿಸಲಾಗಿದೆ. ಜೂ.10 ರಂದು ಅವರು ಕೇದಾರನಾಥ ಯಾತ್ರೆಗೆ ತೆರಳಿದ್ದರು. ಕಳೆದ ಹತ್ತು ದಿನಗಳಿಂದ ವಿವಿಧ ಧಾರ್ಮಿಕ ಕ್ಷೇತ್ರಗಳ ದರ್ಶನ ಪಡೆಯುತ್ತಿದ್ದರು. ಇಂದು (ಗುರುವಾರ) ಕೇದಾರನಾಥ್ ದರ್ಶನ ಮುಗಿಸಿಕೊಂಡು ಋಷಿಕೇಶ್‍ಗೆ ಬಂದಿದ್ದ ವೇಳೆ ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ
ಸಿದ್ದಯ್ಯ ಅವರು ಮೊದಲು ಗವಿಸಿದ್ದೇಶ್ವರ ಮಠದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. ಸದ್ಯ ಶಿವರಾತ್ರೇಶ್ವರ ದೇವಸ್ಥಾನದಲ್ಲಿ ಅರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಹಾಸನದಲ್ಲಿ ಹಾಡಹಗಲೇ ಶೂಟೌಟ್- ಇಬ್ಬರು ಬಲಿ