ಕೊಪ್ಪಳ: ಆಸ್ತಿ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಪತ್ನಿಯನ್ನು ಪತಿಯೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆಯೇ ರಕ್ತ ಹರಿದಿದೆ. ಗೃಹಿಣಿ 38 ವರ್ಷದ ಗಿರಿಜಮ್ಮ ಕೊಲೆಗೀಡಾಗಿದ್ದು, ಕೃತ್ಯ ಎಸಗಿರುವ ಆರೋಪಿ ಬಾಲಪ್ಪ ಕುಂಟ್ರು ಕೊಲೆ ಮಾಡಿ, ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಜಮೀನು ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಪತಿ -ಪತ್ನಿ ನಡುವೆ ಜಗಳ ನಡೆದಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ, ಪತಿ ಬಾಲಪ್ಪ, ಪತ್ನಿ ಗಿರಿಜಮ್ಮನಿಗೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ.
ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.