-75 ವರ್ಷವಾದರೂ ಕೊಪ್ಪಳ ಕೇಂದ್ರಕ್ಕೆ ಸಚಿವ ಸ್ಥಾನ ಸಿಕ್ಕಿಲ್ಲ
ಕೊಪ್ಪಳ: 3 ಬಾರಿ ಶಾಸಕರಾಗಿರುವ ರಾಘವೇಂದ್ರ ಹಿಟ್ನಾಳ್ ಅವರಿಗೆ ಮಂತ್ರಿಸ್ಥಾನ ನೀಡದಿರುವುದು ಬೇಸರ ತಂದಿದೆ ಎಂದು ತಿಳಿಸಿ ಕೊಪ್ಪಳ (Koppal) ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಾಜೀನಾಮೆ ನೀಡಿದ್ದಾರೆ.
ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ (Congress) ಜಿಲ್ಲಾಧ್ಯಕ್ಷೆ ಸ್ಥಾನಕ್ಕೆ ಜ್ಯೋತಿ ಗೊಂಡಬಾಳ್ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅಮರೇಗೌಡ ಬಯ್ಯಾಪುರ ಅವರಿಗೆ ರಾಜೀನಾಮೆ ನೀಡಿದ್ದರು. ಇದನ್ನೂ ಓದಿ:ಬೆಂಗಳೂರಲ್ಲಿ ಮತ್ತೆ ಜೆಸಿಬಿ ಘರ್ಜನೆ; ಕೆ.ಆರ್. ಮಾರುಕಟ್ಟೆಯಲ್ಲಿ ಅತಿದೊಡ್ಡ ತೆರವು ಕಾರ್ಯಾಚರಣೆ
75 ವರ್ಷವಾದರೂ ಕೊಪ್ಪಳ ಜಿಲ್ಲಾ ಕೇಂದ್ರಕ್ಕೆ ಸಚಿವ ಸ್ಥಾನ ಸಿಕ್ಕಿಲ್ಲ. ಮೂರು ಬಾರಿ ಗೆದ್ದಿರೋ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡದೇ ಇರೋದು ನಮಗೆ ಬೇಸರವಾಗಿದೆ ಎಂದು ರಾಜೀನಾಮೆಯಲ್ಲಿ ಉಲ್ಲೇಖಿಸಿದ್ದಾರೆ.



