ಕೊಪ್ಪಳ: ಗುತ್ತಿಗೆದಾರರ ಜೀವ ಉಳಿಸುವಂತೆ ಪ್ರಧಾನಿಗೆ ಕೊಪ್ಪಳ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆಯೊಬ್ಬರು ಪತ್ರ ಬರೆದಿದ್ದಾರೆ.
Advertisement
ಪ್ರೌಢಶಾಲಾ ಕಟ್ಟಡ ಕಾಮಗಾರಿಯನ್ನು ನಿಗದಿತ ವೇಳೆಗೆ ಪೂರ್ಣಗೊಳಿಸಿದರೂ ಶಿಕ್ಷಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯು, ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರಿಗೆ ಹಣ ಪಾವತಿಸದೇ ಸತಾಯಿಸುತ್ತಿದೆ ಎಂದು ಹುಲಿಹೈದರ್ ಕ್ಷೇತ್ರದ ಮಾಜಿ ಸದಸ್ಯೆ ಶಾಂತಾ ರಮೇಶ್ ನಾಯಕ್ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: 4 ಲಕ್ಷ ರೂ.ಮೌಲ್ಯದ ಪಡಿತರ ಅಕ್ಕಿ ಅಕ್ರಮ ಸಂಗ್ರಹ
Advertisement
2018-19ನೇ ಸಾಲಿನ ಅನುದಾನದಡಿ ಜಿಲ್ಲೆಯ ವಿವಿಧೆಡೆ ಪ್ರೌಢಶಾಲಾ ಕಟ್ಟಡಗಳ ನಿರ್ಮಾಣದ ಟೆಂಡರ್ ಪಡೆದ ಗುತ್ತಿಗೆದಾರರು ಕಾಮಗಾರಿ ಮುಗಿಸಿ ಎರಡು ವರ್ಷಗಳಾದರೂ ಶಿಕ್ಷಣ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಕೋಟಿಗಟ್ಟಲೇ ಹಣ ಬಾಕಿ ಉಳಿಸಿಕೊಂಡಿದೆ.
Advertisement
Advertisement
ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರು ಇಲಾಖೆಗೆ ಸಾಕಷ್ಟು ಬಾರಿ ಅಲೆದಾಡಿದರೂ ಅವರಿಗೆ ಸೇರಬೇಕಾದ ಅರ್ಧದಷ್ಟು ಹಣವನ್ನೂ ನೀಡದೇ ಸತಾಯಿಸುತ್ತಿದೆ. ಆರ್ಥಿಕ ಸಂಕಷ್ಟದಲ್ಲಿರುವ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದೊದಗಿದ್ದು, ಕೂಡಲೇ ಶಿಕ್ಷಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಗೆ ಬಾಕಿ ಹಣ ನೀಡುವಂತೆ ಆದೇಶಿಸಬೇಕೆಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಲ್ಲಿ ದಲಿತ ಸಿಎಂಗೆ ಸಿದ್ದು ಅಡ್ಡಿನಾ..?- ಪರಂ ಹೇಳಿಕೆ ಪ್ರಸ್ತಾಪಿಸಿ ಬಿಜೆಪಿ ತಿರುಗೇಟು