Connect with us

Districts

ಸಿದ್ದರಾಮಯ್ಯ ವಿಪಕ್ಷ ನಾಯಕನಾಗಿ ಮುಂದುವರಿಯಲಿ: ಹಿಟ್ನಾಳ್

Published

on

ಕೊಪ್ಪಳ: ವಿರೋಧ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಮುಂದುವರಿಯಬೇಕು. ಅಷ್ಟೇ ಅಲ್ಲ ಹೈಕಮಾಂಡ್ ಸಹ ಸಿದ್ದರಾಮಯ್ಯರನ್ನು ಮುಂದುವರಿಸುವ ವಿಶ್ವಾಸವಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ಸಿನಲ್ಲಿ ಸಿದ್ದರಾಮಯ್ಯನವರದ್ದು ಮುಗಿದ ಅಧ್ಯಾಯ ಅಲ್ಲ. ಸಿದ್ದರಾಮಯ್ಯ ನಿನ್ನೆ-ಮೊನ್ನೆ ಬಂದ ಮುಖಂಡರಲ್ಲ. ಜೀವನದುದ್ದಕ್ಕೂ ಹೋರಾಟ ಮಾಡಿದವರು ಜೊತೆಗೆ ಅವರು ಪ್ರಯತ್ನವಾದಿ ಎಂದರು.

ಸೋಲು ಗೆಲುವು ಸಾಮಾನ್ಯವಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ಸನ್ನು ಮತ್ತೆ ಅಧಿಕಾರಕ್ಕೆ ತರ್ತಾರೆ. ನಾವು ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿಯೇ ಮುಂದುವರಿಯುತ್ತೇವೆ. ಉಪಚುನಾವಣೆಯ ಜನಾದೇಶವನ್ನು ನಾವು ಸ್ವಾಗತಿಸುತ್ತೇವೆ. ಬಿಜೆಪಿ ಹಣ, ಅಧಿಕಾರ ದುರಪಯೋಗದಿಂದ ಗೆದ್ದಿದೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರ ಅಧಿಕಾರದಲ್ಲಿರೋ ಕಾರಣ ಮತದಾರರು ಒಲವು ತೋರಿಸಿದ್ದು, ಇನ್ನಾದ್ರೂ ಬಿಜೆಪಿ ಒಳ್ಳೆಯ ಆಡಳಿತ ಕೊಡಲಿ ಎಂದು ತಿಳಿಸಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಕೆಡವಲು ಕಾರಣರಾದ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿದೆ. ಇದರ ಫಲಿತಾಂಶ ಸೋಮವಾರ ಹೊರ ಬಿದ್ದಿದ್ದು, 12 ಕಡೆಗಳಲ್ಲಿ ಕಮಲ ಅರಳಿದೆ. ಅದರಲ್ಲಿಯೂ ಜೆಡಿಎಸ್ ಭದ್ರ ಕೋಟೆಯಾಗಿದ್ದ ಮಂಡ್ಯದ ಕೆಆರ್ ಪೇಟೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಜಯಗಳಿಸಿರುವುದು ಅಚ್ಚರಿ ಮೂಡಿಸಿದೆ. ಹುಣಸೂರು ಹಾಗೂ ಶಿವಾಜಿನಗರದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ್ದು, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಜಯಗಳಿಸಿದ್ದಾರೆ.

ಚುನಾಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷ ಹಾಗೂ ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ, ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು.

 

Click to comment

Leave a Reply

Your email address will not be published. Required fields are marked *