ಕೊಪ್ಪಳ: ಒಂದು ಚೀಲ ಸಿಮೆಂಟ್ ಕೊಟ್ಟಿದ್ದು ಸಾರ್ಥಕವಾಯಿತು ಎಂದು ಕೊಪ್ಪಳದ ಮುಸ್ಲಿಂ ಯುವಕ ಅಯೋಧ್ಯೆ ತೀರ್ಪಿನ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ.
ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದ ಸಂಶುದ್ದೀನ್ ಎರಡು ವರ್ಷಗಳ ಹಿಂದೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಒಂದು ಚೀಲ ಸಿಮೆಂಟ್ ನೀಡಿದ್ದರು. ಇದೀಗ ಸುಪ್ರೀಂಕೋರ್ಟ್ ಶನಿವಾರ ನೀಡಿದ ಮಹತ್ವದ ತೀರ್ಪಿನ ಖುಷಿಯನ್ನು ಶಂಶುದ್ದೀನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Advertisement
Advertisement
ಅಯೋಧ್ಯೆ ತೀರ್ಪು ದೇಶವು ಇಂದು ಖುಷಿ ಪಡುವ ವಿಚಾರ. ಹಿಂದೂ-ಮುಸ್ಲಿಮರು ಭಾವೈಕ್ಯತೆಯಿಂದ ಸುಪ್ರೀಂಕೋರ್ಟ್ ತೀರ್ಪನ್ನು ಸ್ವೀಕರಿಸಿದ್ದಾರೆ. ನಾವೆಲ್ಲರೂ ಅಣ್ಣ-ತಮ್ಮಂದಿರಂತೆ ಬದುಕಬೇಕಿದೆ. ಕೊಪ್ಪಳ ಜಿಲ್ಲೆಯ ವತಿಯಿಂದ ಉತ್ತರ ಪ್ರದೇಶದ ಅಯೋಧ್ಯೆಗೆ ಹೋಗಿ ರಾಮ ಮಂದಿರ ನಿರ್ಮಾಣಕ್ಕೆ ಒಂದು ಚೀಲ ಸಿಮೆಂಟ್ ನೀಡಿ ಬಂದಿದ್ದೇನೆ. ಈ ಕೆಲಸ ಇಂದು ಸಾರ್ಥಕ ಅನಿಸುತ್ತಿದೆ ಎಂದು ಸಂಶುದ್ದೀನ್ ಹೇಳಿದ್ದಾರೆ.
Advertisement
ನಾನೊಬ್ಬ ಭಾರತೀಯ, ಹಿಂದೂ-ಮುಸ್ಲಿಮರು ಭಾವೈಕ್ಯತೆಯಿಂದ ಬದುಕಬೇಕು ಎನ್ನುವುದು ನನ್ನ ಉದ್ದೇಶವಾಗಿದೆ. ಮಸೀದಿ ನಿರ್ಮಾಣಕ್ಕೆ 5 ಎಕರೆ ಜಾಗವನ್ನು ಸುಪ್ರೀಂಕೋರ್ಟ್ ನೀಡಿದೆ. ಅಯೋಧ್ಯೆಯ ತೀರ್ಪನ್ನು ತಲೆಬಾಗಿ ಸ್ವೀಕರಿಸಿದ್ದೇವೆ ಎಂದು ಸಂಶುದ್ದೀನ್ ತಿಳಿಸಿದರು. ಇದನ್ನೂ ಓದಿ: ಅಂದು ಹೇಳಿದಾಗ ಟೀಕೆ ಬಂದಿತ್ತು, ಇಂದು ನನ್ನ ಸಾಕ್ಷ್ಯ ಆಧಾರಿಸಿ ತೀರ್ಪು ಬಂದಿದೆ- ಕೆ.ಕೆ.ಮೊಹಮ್ಮದ್ ಸಂತಸ
Advertisement
ಸಂಶುದ್ದೀನ್ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ 2017ರ ಏಪ್ರಿಲ್‍ನಲ್ಲಿ ನೈತಿಕ ಬೆಂಬಲ ನೀಡಿದ್ದರು. ಜೊತೆಗೆ ಸಾಂಕೇತಿಕವಾಗಿ ಒಂದು ಸಿಮೆಂಟ್ ಚೀಲ ನೀಡಲು ಅಯೋಧ್ಯೆಗೆ ಪ್ರಯಾಣ ಬೆಳೆಸುತ್ತಿದ್ದರು. ಇದಕ್ಕೂ ಮುನ್ನ ಸಂಶುದ್ದೀನ್ ಅವರು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ರಾಮಮಂದಿರ ಕಟ್ಟಲು ಒಂದು ಚೀಲ ಸಿಮೆಂಟ್ ಒಯ್ಯುತ್ತಿದ್ದೇನೆ ಎಂದು ಸ್ಟೇಟಸ್ ಹಾಕಿಕೊಂಡಿದ್ದರು. ಈ ವೇಳೆ ಅವರಿಗೆ ಸಾಕಷ್ಟು ಬೆದರಿಕೆ ಕರೆ ಬಂದಿದ್ದವು ಎನ್ನಲಾಗಿತ್ತು. ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರದಲ್ಲಿ ವಿಶೇಷತೆ ಏನು? ಹೇಗಿರಲಿದೆ ದೇವಾಲಯ?
ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಸಂಶುದ್ದೀನ್ ಪ್ರವೃತ್ತಿಯಲ್ಲಿ ಸಿನಿಮಾ ಕಲಾವಿದರು. ಲಂಬಾಣಿ ಭಾಷೆಯ ಕೋವೆಲ್ ಮತ್ತು ನಟ ಲೂಸ್ ಮಾದ ನಟಿಸಿರುವ ಧೂಳಿಪಟ ಚಿತ್ರದಲ್ಲಿ ಸಂಶುದ್ದೀನ್ ಖಳನಾಯಕರಾಗಿ ಅಭಿನಯಿಸಿದ್ದಾರೆ. ಶಂಶುದ್ದೀನ್ ಅವರಿಗೆ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಹಿಂದೂ ಪರ ಸಂಘಟನೆ ಮುಖಂಡರು ಸನ್ಮಾನಿಸಿ, ಬೀಳ್ಕೊಟ್ಟಿದ್ದರು. ಇದನ್ನೂ ಓದಿ: ರಾಮನಿಗೆ `ಪುರಾತತ್ವ’ ಆಧಾರ – 5 ಶತಮಾನಗಳ ವಿವಾದಕ್ಕೆ ಷರಾ ಬರೆದ ಸುಪ್ರೀಂ