– ಮಧ್ಯಾಹ್ನ ಬೆಂಗ್ಳೂರಿಗೆ ಏರ್ ಲಿಫ್ಟ್
ಬೆಂಗಳೂರು: ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಕೋರಮಂಗಲದ ಪುರುಷೋತ್ತಮ ರೆಡ್ಡಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇವರ ಎದೆ ಭಾಗಕ್ಕೆ ನುಗ್ಗಿದ ಕಬ್ಬಿಣದ ಸರಳು ಹೊಕ್ಕಿದ್ದು, ಕತ್ತಿನ ಭಾಗದಲ್ಲಿ ಕಬ್ಬಿಣದ ಚೂರು ಸಿಲುಕಿಕೊಂಡಿದೆ. ಕೊಲಂಬೋದ ಖಾಸಗಿ ಆಸ್ಪತ್ರೆಯಲ್ಲಿ ಪುರುಷೋತ್ತಮ್ ರೆಡ್ಡಿಗೆ ಚಿಕಿತ್ಸೆ ನೀಡಲಾಗ್ತಿತ್ತು. ಆದರೆ ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲು ನಿರ್ಧರಿಸಲಾಗಿದೆ.
Advertisement
Advertisement
ಇಂದು ಮಧ್ಯಾಹ್ನ ಬೆಂಗಳೂರಿಗೆ ಪುರುಷೋತ್ತಮ್ ರನ್ನು ಕರೆದುಕೊಂಡು ಬರಲಾಗುತ್ತಿದ್ದು, ಝೀರೋ ಟ್ರಾಫಿಕ್ ಮೂಲಕ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಪುರುಷೋತ್ತಮ್ ರೆಡ್ಡಿ ಯಲಹಂಕ ಶಾಸಕ ಎಸ್ ವಿಶ್ವನಾಥ್ ಸಂಬಂಧಿ ಹಾಗೂ ಮೃತ ನಾಗರಾಜ್ ರೆಡ್ಡಿಯ ಆಪ್ತ ಸ್ನೇಹಿತರಾಗಿದ್ದರು. ಅವಘಡ ನಡೆದಂದು ಇವರು ಶ್ರೀಲಂಕಾದ ಶಾಂಗ್ರೀಲಾ ಹೋಟೆಲ್‍ನಲ್ಲಿ ತಂಗಿದ್ದರು ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಬಲಿಯಾದ ಐವರ ಮೃತದೇಹ ಬೆಂಗ್ಳೂರಿಗೆ ಶಿಫ್ಟ್
Advertisement
ಏನಿದು ಘಟನೆ?:
ಈಸ್ಟರ್ ಶುಭ ಸಂದರ್ಭದಲ್ಲಿ ಪ್ರಾರ್ಥನೆಗೆ ಸೇರಿದ್ದವರನ್ನು ಗುರಿಯಾಗಿಸಿ ಭಾನುವಾರ ಬೆಳಗ್ಗೆ 8:45ಕ್ಕೆ ಬಾಂಬ್ ಸ್ಫೋಟಿಸಲಾಗಿದೆ. ಕೊಲಂಬೋ ಬಂದರು ಸಮೀಪದ ಸೆಬಾಸ್ಟಿಯನ್ ಚರ್ಚ್, ಸೇಂಟ್ ಅಂತೋನಿಯ ಶ್ರೈನ್, ಜಿಯಾನ್ ಚರ್ಚ್, ಸಿನ್ನಮೋನ್ ಗ್ರ್ಯಾಂಡ್, ಕೊಲಂಬೊದ ಶಾಂಗ್ರಿ-ಲಾ ಹೋಟೆಲ್, ಕಿಂಗ್ಸ್ಬರಿ ಹೋಟೆಲ್, ದೆಹಿವಾಲಾ -ಮೌಂಟ್ ಲವಿನಿಯಾದಲ್ಲಿನ ದೆಹಿವಾಲಾ ಝೂ, ಮಹವಿಲಾ ಗಾರ್ಡನ್ಸ್‍ನಲ್ಲಿ ಬಾಂಬ್ ಸ್ಫೋಟವಾಗಿದೆ. ಇದನ್ನೂ ಓದಿ: ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ – ಶತಕೋಟ್ಯಧಿಪತಿಯ ಮೂವರು ಮಕ್ಕಳು ಬಲಿ
Advertisement
ಬಾಂಬ್ ಸ್ಫೋಟದ ತೀವ್ರತೆಗೆ ಚರ್ಚ್ ಗಳ ಮೇಲ್ಛಾವಣಿ ಕಿತ್ತು ಹಾರಿಹೋಗಿತ್ತು. ಚರ್ಚ್ ಒಳಗಡೆಯಿದ್ದ ಬೆಂಚ್‍ಗಳು ಮುರಿದು ಹೋಗಿತ್ತು. ಚರ್ಚ್ ಒಳಗಡೆ ಎಲ್ಲಿ ನೋಡಿದರಲ್ಲಿ ರಕ್ತವೇ, ಛಿದ್ರ ಛಿದ್ರ ಮೃತದೇಹಗಳೇ ಕಾಣಸಿಗುತಿತ್ತು.