ಬೆಂಗಳೂರು: ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕೋರಮಂಗಲದಲ್ಲಿರುವ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸ್ಪಾನಲ್ಲಿದ್ದ ಆರು ಯುವತಿಯರನ್ನು ರಕ್ಷಿಸಲಾಗಿದೆ.
ಕೋರಮಂಗಲದಲ್ಲಿರುವ ಜಾಕ್ ಸೆಲೂನ್ ಆ್ಯಂಡ್ ವೆಲ್‍ನೆಸ್ ಸ್ಪಾ ಮೇಲೆ ದಾಳಿ ನಡೆಸಲಾಗಿದೆ. ಸ್ಪಾನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಸ್ಪಾ ವ್ಯವಸ್ಥಾಪಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ಪಾ ಮಾಲೀಕ ಅರವಿಂದ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ವಿಶೇಷ ಜಾಲ ಬೀಸಿದ್ದಾರೆ. ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜನವರಿಯಲ್ಲಿ ಕೋರಮಂಗಲ ಬಳಿಯ ಈಜಿಪುರದಲ್ಲಿ ಬಾಡಿ ಟು ಬಾಡಿ ಮಸಾಜ್ ಹೆಸರನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪಾರ್ಲರ್ ಮೇಲೆ ಸಿಸಿಬಿ ಪೊಲೀಸ್ರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದರು. ಸ್ಪಾ ಹೆಸರಲ್ಲಿ ಗಿರಾಕಿಗಳನ್ನು ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತಿದ್ದರು. ಹೆಣ್ಣುಮಕ್ಕಳಿಂದ ಬಾಡಿ ಟು ಬಾಡಿ ಮಸಾಜ್ ಹೆಸರಲ್ಲಿ ಆಕರ್ಷಕರಾಗುವಂತೆ ಮಾಡಿ ಸೆಕ್ಸ್ ನಲ್ಲಿ ತೊಡಗಿಸಿಕೊಳ್ಳುತ್ತಿದ್ದರು.
ಕೆಲಸ ಕೊಡಿಸೋದಾಗಿ ಹೆಣ್ಣುಮಕ್ಕಳನ್ನು ಕರೆತಂದು ಹಣದ ಆಸೆ ತೋರಿಸಿ ಸೆಕ್ಸ್ ನಲ್ಲಿ ತೊಡಗಿಕೊಳ್ಳುವಂತೆ ಮಾಡುತ್ತಿದ್ದರು. ಹ್ಯಾಪಿ ಎಂಡಿಂಗ್, ಬಾಡಿ ಟು ಬಾಡಿ ಮಸಾಜ್ ಹೆಸರಲ್ಲಿ ಗ್ರಾಹಕರಿಗೆ ಆಹ್ವಾನ ನೀಡುತ್ತಿರುವುದು ರೇಡ್ ವೇಳೆ ಬಯಲಿಗೆ ಬಂದಿತ್ತು.