ಮುಂಬೈ: ಕೊರಿಯಾದ ಯುವತಿಯೊಬ್ಬಳು (Korean Woman) ಮುಂಬೈನಲ್ಲಿ (Mumbai) ಯೂಟ್ಯೂಬ್ ಲೈವ್ ಸ್ಟ್ರೀಮ್ (Live Stream) ನಡೆಸುತ್ತಿದ್ದ ವೇಳೆ ಇಬ್ಬರು ಪುಂಡರು ಆಕೆಗೆ ಕಿರುಕುಳ (Harassment) ನೀಡಿರುವ ಘಟನೆ ನಡೆದಿದೆ. ಯುವತಿಗೆ ಕಿರುಕುಳ ನೀಡಿದ ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಯುವತಿ ಲೈವ್ ಸ್ಟ್ರೀಮ್ ನಡೆಸುತ್ತಿದ್ದ ವೇಳೆ ಒಬ್ಬ ಆರೋಪಿ ಯುವತಿಯನ್ನು ಕೈ ಹಿಡಿದು ಎಳೆದೊಯ್ಯುವುದು ವೀಡಿಯೋದಲ್ಲಿ ಕಂಡುಬಂದಿದೆ. ಅಪರಿಚಿತ ವ್ಯಕ್ತಿಯೊಡನೆ ಆತ್ಮೀಯತೆಯಿಂದ ಮಾತನಾಡಿಸಲು ಹೋಗಿದ್ದಾಗ ಈ ಘಟನೆ ನಡೆದಿದೆ.
Advertisement
Advertisement
Advertisement
ಆರೋಪಿ ಯುವತಿಗೆ ಆತನ ಗೆಳೆಯನೊಬ್ಬನ ಬೈಕಿನಲ್ಲಿ ಕುಳಿತುಕೊಳ್ಳುವಂತೆ ಒತ್ತಾಯಿಸಿ, ಆತ ನಿನಗೆ ಡ್ರಾಪ್ ನೀಡುತ್ತಾನೆ ಎಂದು ಹೇಳಿದ್ದಾನೆ. ಇದನ್ನು ಯುವತಿ ನಿರಾಕರಿಸಿದ್ದಾಳೆ. ಬಳಿಕ ಆತ ಯುವತಿಗೆ ಮುತ್ತಿಕ್ಕಲೂ ಪ್ರಯತ್ನಿಸಿದ್ದಾನೆ. ಇದರಿಂದ ಕಳವಳಗೊಂಡ ಯುವತಿ ಮನೆಗೆ ಹೋಗುವುದಾಗಿ ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದಾಳೆ.
Advertisement
ಆದರೂ ಬೆಂಬಿಡದ ಇಬ್ಬರು ಯುವಕರು ಆಕೆಯನ್ನು ಬೈಕಿನಲ್ಲಿ ಹಿಂಬಾಲಿಸಿದ್ದಾರೆ. ನನ್ನ ಮನೆ ಇಲ್ಲೇ ಹತ್ತರವಿದೆ ಎಂದು ಹೇಳಿ ಯುವತಿ ಅವರಿಬ್ಬರನ್ನು ಅಲ್ಲಿಂದ ಹೋಗುವಂತೆ ಮಾಡಿದ್ದಾಳೆ. ಇದನ್ನೂ ಓದಿ: ಬೆಂಗ್ಳೂರಿನ ಇತಿಹಾಸದಲ್ಲೇ ಫಸ್ಟ್ ಟೈಮ್ ಎಸ್‍ಪಿ ರೋಡ್ ಬಂದ್ – ಡಿ.13ಕ್ಕೆ ವಿಧಾನಸೌಧಕ್ಕೆ ವರ್ತಕರ ಮೆರವಣಿಗೆ
ತನಗಾದ ಕಿರುಕುಳದ ಬಗ್ಗೆ ಯುವತಿ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾಳೆ. ಕಳೆದ ರಾತ್ರಿ ನನಗೆ ಒಬ್ಬ ಕಿರುಕುಳ ನೀಡಿದ್ದಾನೆ. ಆತ ತನ್ನ ಇನ್ನೊಬ್ಬ ಗೆಳೆಯನೊಂದಿಗೆ ಇದ್ದಿದ್ದರಿಂದ ನಾನು ಅಲ್ಲಿಂದ ತಪ್ಪಿಸಿಕೊಳ್ಳಲು ನನ್ನ ಕೈಲಾದಷ್ಟು ಪ್ರಯತ್ನಿಸಿದ್ದೇನೆ. ನಾನು ಅಪರಿಚಿತರೊಂದಿಗೆ ಆತ್ಮೀಯತೆಯಿಂದ ಮಾತನಾಡಿದ್ದರಿಂದಲೇ ಹೀಗೆಲ್ಲಾ ಆಗಿದೆ ಎಂದು ಕೆಲವರು ತಿಳಿಸಿದ್ದಾರೆ. ಈ ಘಟನೆಯ ಬಳಿಕ ನಾನು ಮುಂದೆಯೂ ಸ್ಟ್ರೀಮಿಂಗ್ ಮಾಡಬೇಕೇ ಎಂಬ ಬಗ್ಗೆ ಯೋಚನೆ ಮಾಡುವಂತಾಗಿದೆ ಎಂದು ಯುವತಿ ಕಳವಳ ವ್ಯಕ್ತಪಡಿಸಿದ್ದಾಳೆ.
ಮುಂಬೈ ಪೊಲೀಸರು ಈ ವೀಡಿಯೋವನ್ನಾಧರಿಸಿ ಸ್ವಯಂಪ್ರೇರಿತವಾಗಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಡ್ರಗ್ಸ್ ಸೇವನೆ ಆರೋಪ – NCB ಅಧಿಕಾರಿಗಳಿಂದ 3 ಯುವತಿಯರು ವಶಕ್ಕೆ