ಜೈಪುರ: ಮದುವೆ ಮನೆಗೆ ಹೋಗುತ್ತಿದ್ದ ಕಾರೊಂದು ನದಿಗೆ ಬಿದ್ದು ವರ ಸೇರಿದಂತೆ 9 ಮಂದಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಉಜ್ಜಯಿನಿ ಸಮೀಪ ನಡೆದಿದೆ.
ಮದುವೆಗೆಂದು 9 ಪ್ರಯಾಣಿಕರು ಕಾರಿನಲ್ಲಿ ಕೋಟಾದಿಂದ ಉಜ್ಜಯಿನಿಗೆ ಹೋಗುತ್ತಿದ್ದರು. ಇನ್ನೇನು ಕೆಲವೇ ಗಂಟೆಯಲ್ಲಿ ಮದುವೆ ಎಂದು ಇಡೀ ಕುಟುಂಬವೇ ಸಂಭ್ರಮದಲ್ಲಿ ತೇಲಾಡುತ್ತಿತ್ತು. ಆದರೆ ಆ ವಿಧಿಯಾಟ ಬೇರೆಯಿತ್ತು. ಮದ್ಯಪಾನ ಸೇವಿಸಿ ಚಾಲಕನು ವರನಿದ್ದ ಕಾರನ್ನು ಚಲಾಯಿಸುತ್ತಿದ್ದ. ಇದರ ಪರಿಣಾಮ ಕಾರು ನಿಯಂತ್ರಣ ತಪ್ಪಿ ಕೋಟಾದ ಚಂಬಲ್ ನದಿಗೆ ಬಿದ್ದಿದೆ. ಇದರಿಂದಾಗಿ ನದಿಯಲ್ಲೇ 9 ಮಂದಿ ಮೃತಪಟ್ಟರು.
Advertisement
Advertisement
ಮುಂಜಾನೆ ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಈ ಬಗ್ಗೆ ಸ್ಥಳೀಯ ಪೊಲೀಸರು ಮತ್ತು ಜಿಲ್ಲಾಡಳಿತ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ. ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕ್ರೇನ್ ಸಹಾಯದಿಂದ ಕಾರನ್ನು ಹೊರತೆಗೆಯಲಾಗಿದೆ. ಇದನ್ನೂ ಓದಿ: ಉತ್ತರ ಪ್ರದೇಶಕ್ಕೆ 3ನೇ ಹಂತ, ಪಂಜಾಬ್ ಮತದಾನ ಇಂದು – ಅಖಿಲೇಶ್ ಯಾದವ್ ಭವಿಷ್ಯ ನಿರ್ಧಾರ
Advertisement
कोटा में बारातियों की कार चंबल नदी में गिरने से दूल्हे सहित 9 लोगों की मृत्यु बेहद दुखद व दुर्भाग्यपूर्ण है। कलक्टर से बात कर पूरी घटना की जानकारी ली है। मेरी गहरी संवेदनाएं शोकाकुल परिजनों के साथ हैं,ईश्वर उन्हें यह आघात सहने की शक्ति दें, दिवंगतों की आत्मा को शांति प्रदान करें।
— Ashok Gehlot (@ashokgehlot51) February 20, 2022
Advertisement
ಈ ಕುರಿತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿ ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು. ಇದನ್ನೂ ಓದಿ: ಎಸ್‍ಪಿ ಹಿರಿಯ ನಾಯಕ ಅಹ್ಮದ್ ಹಸನ್ ನಿಧನ – ಕೆಲವೇ ಗಂಟೆಗಳಲ್ಲಿ ಪತ್ನಿ ಕೂಡ ಸಾವು