ಬೆಂಗಳೂರು: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದ ಬೆನ್ನಲ್ಲೆ ಅನೇಕ ರಾಜಕೀಯ ನಾಯಕರು ತೀರ್ಪಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಯುವ ಬ್ರಿಗೇಡ್‍ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ, ಸಂಸದ ಹೆಚ್.ಸಿ ಮೋಹನ್ ಹಾಗೂ ಮಾಜಿ ಸಚಿವ ಸುರೇಶ್‌ಕುಮಾರ್ ಟ್ವೀಟ್ ಮೂಲಕ ಪ್ರತಿಕ್ರಿಯಿಸಿ ಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್ ಮಾಡಿ, ಹಿಜಬ್ ವಿವಾದ ವಿಚಾರದಲ್ಲಿ ರಾಜ್ಯದ ಉಚ್ಚ ನ್ಯಾಯಾಲಯ ತೀರ್ಪು ನೀಡಿದ್ದು, ಸರ್ಕಾರದ ನಿಲುವನ್ನು ಸಮರ್ಥಿಸಿ ಸಮವಸ್ತ್ರ ಕಡ್ಡಾಯ ಆದೇಶವನ್ನು ಎತ್ತಿ ಹಿಡಿದಿದೆ. ನ್ಯಾಯಾಲಯದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಎಲ್ಲರೂ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Advertisement
ಹಿಜಾಬ್ ವಿವಾದ ವಿಚಾರದಲ್ಲಿ ರಾಜ್ಯದ ಉಚ್ಚ ನ್ಯಾಯಾಲಯ ತೀರ್ಪು ನೀಡಿದ್ದು ಸರ್ಕಾರದ ನಿಲುವನ್ನು ಸಮರ್ಥಿಸಿ ಸಮವಸ್ತ್ರ ಕಡ್ಡಾಯ ಆದೇಶವನ್ನು ಎತ್ತಿಹಿಡಿದಿದೆ. ನ್ಯಾಯಾಲಯದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ.ಎಲ್ಲರೂ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇವೆ.#HijabRow
— Kota Shrinivas Poojari (@KotasBJP) March 15, 2022
ಯುವ ಬ್ರಿಗೇಡ್‍ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಿಜಬ್ ತೀರ್ಪಿಗೆ ಸಂಬಂಧಿಸಿ ಶಿಕ್ಷಣ ಕೇಂದ್ರಗಳಲ್ಲಿ ಹಿಜಬ್ ಇಲ್ಲ, ಕೇವಲ ಸಮವಸ್ತ್ರ. ಇದು ಹೈಕೋರ್ಟ್ ಆದೇಶ ಎಂದಿದ್ದಾರೆ. ಇದನ್ನೂ ಓದಿ: ಖೇಲ್ ಖತಂ, ನಾಟಕ್ ಬಂದ್, ಶಾಲೆಗೆ ಹಿಂತಿರುಗಿ: ಮಾಳವಿಕಾ ಅವಿನಾಶ್
Advertisement
No hijab only uniform in education centres. HC orders.
— Chakravarty Sulibele (@astitvam) March 15, 2022
ಸಂಸದ ಹೆಚ್.ಸಿ ಮೋಹನ್ ಸರಣಿ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದು, ಶಾಲಾ-ಕಾಲೇಜುಗಳಲ್ಲಿ ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಬಟ್ಟೆಗಳನ್ನು ನಿಷೇಧಿಸುವ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಕರ್ನಾಟಕ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಅನುಸರಿಸಬೇಕು. ವಿದ್ಯಾರ್ಥಿಗಳು ಏಕರೂಪದ ಬಟ್ಟೆಗಳನ್ನು ಧರಿಸಬೇಕು ಎಂದು ತಿಳಿಸಿದರು.
Advertisement
#KarnatakaHighCourt upholds the order banning clothes that tend to disturb equality, integrity & public order in schools and colleges.
Guidelines laid down by the Govt of #Karnataka should be followed.
Students must wear a uniform style of clothes.#HijabControversy #HijabRow pic.twitter.com/63KgdxO9ZS
— P C Mohan (@PCMohanMP) March 15, 2022
ತರಗತಿಯಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಮುಸ್ಲಿಂ ಹುಡುಗಿಯರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಹಿಜಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶವನ್ನು ತೀರ್ಪು ನೀಡಿದೆ. ಜೊತೆಗೆ ಶಾಲೆಯಲ್ಲಿ ಹಿಜಬ್ ಧರಿಸಲು ನಿಷೇಧವನ್ನು ಎತ್ತಿಹಿಡಿದಿದೆ. ತೀರ್ಪು ಸ್ವಾಗತಾರ್ಹವಾಗಿದೆ ಎಂದರು. ಇದನ್ನೂ ಓದಿ: 6 ವಿದ್ಯಾರ್ಥಿನಿಯರು ಹಠ ಮಾಡದೇ ಶಾಲೆಗೆ ಬರ್ಬೇಕು, ಸಮವಾದ ಶಿಕ್ಷಣ ನೀಡುತ್ತೇವೆ: ರಘುಪತಿ ಭಟ್
Advertisement
ಶಾಲಾ ಸಮವಸ್ತ್ರ ವಿಷಯ ಕುರಿತ ಕರ್ನಾಟಕ ಉಚ್ಛ ನ್ಯಾಯಾಲಯದ ತೀರ್ಪು ಅತ್ಯಂತ ಸ್ವಾಗತಾರ್ಹ. ಸಮಸ್ಯೆ ಇಲ್ಲಿಗೆ ಕೊನೆಯಾಗಿ, ಎಲ್ಲಾ ಮಕ್ಕಳು ಶಾಲೆ – ಕಾಲೇಜುಗಳಲ್ಲಿ ಶಿಕ್ಷಣ ಪಡೆಯುವುದಕ್ಕೆ ಗಮನ ಹರಿಸುವಂತೆ ನಾವೆಲ್ಲ ಸಹಕಾರ ನೀಡಬೇಕಿದೆ.
— S.Suresh Kumar (@nimmasuresh) March 15, 2022
ಮಾಜಿ ಸಚಿವ ಎಸ್ ಸುರೇಶ್‌ಕುಮಾರ್ ಟ್ವೀಟ್ ಮಾಡಿ, ಸಮವಸ್ತ್ರ ವಿಷಯ ಕುರಿತ ಕರ್ನಾಟಕ ಉಚ್ಛ ನ್ಯಾಯಾಲಯದ ತೀರ್ಪು ಅತ್ಯಂತ ಸ್ವಾಗತಾರ್ಹ. ಸಮಸ್ಯೆ ಇಲ್ಲಿಗೆ ಕೊನೆಯಾಗಿ, ಎಲ್ಲಾ ಮಕ್ಕಳು ಶಾಲೆ – ಕಾಲೇಜುಗಳಲ್ಲಿ ಶಿಕ್ಷಣ ಪಡೆಯುವುದಕ್ಕೆ ಗಮನ ಹರಿಸುವಂತೆ ನಾವೆಲ್ಲ ಸಹಕಾರ ನೀಡಬೇಕಿದೆ. ಇದನ್ನೂ ಓದಿ: ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ, ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು: ಬೊಮ್ಮಾಯಿ
ಐತಿಹಾಸಿಕ ತೀರ್ಪು..?: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ಎಲ್ಲರೂ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ.