ಮಡಿಕೇರಿ: ಕಾಂಗ್ರೆಸ್ ರಾಜಕೀಯ ಕಾರಣಕ್ಕೆ ಮೇಕೆದಾಟು ಪಾದಯಾತ್ರೆ ಮಾಡುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ (Kota Srinivas Poojary) ವಾಗ್ದಾಳಿ ನಡೆಸಿದ್ದಾರೆ.
Advertisement
ಮಡಿಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಳಂಬದಲ್ಲಿ ಯಾವುದೇ ರಾಜಕಾರಣ ಇಲ್ಲ ಕಾಂಗ್ರೆಸ್ ನವರು ರಾಜಕೀಯ ಕಾರಣಕ್ಕೆ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ. ಮೇಕೆದಾಟು ಸೇರಿದಂತೆ ಯಾವುದೇ ನೀರಿನ ಯೋಜನೆ ವಿಷಯದಲ್ಲಿ ಸರ್ಕಾರ ರಾಜಿಮಾಡಿಕೊಂಡಿಲ್ಲ. ಕೋವಿಡ್ ಸಂದರ್ಭದಲ್ಲಿ ಪಾದಯಾತ್ರೆ ನಡೆಸಿ ಅವರಿಂದ ಆದ ಅನಾಹುತ ಅವರಿಗೆ ಅರಿವಾಗಿದೆ. ಈಗ ಮತ್ತೆ ಪಾದಯಾತ್ರೆ ಆರಂಭಿಸಿರುವುದು ಒಂದು ರಾಜಕೀಯ ಪ್ರೇರಿತವಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಂಠೀರವ ಸ್ಟುಡಿಯೋ ಆವರಣದಲ್ಲಿ 14 ಅಡಿ ಎತ್ತರದ ಅಂಬರೀಶ್ ಪ್ರತಿಮೆ
Advertisement
Advertisement
ಒಳ್ಳೆ ಕೆಲಸವನ್ನು ನಮ್ಮ ಸರ್ಕಾರ ಮಾಡಿರುವುದನ್ನು ಕಾಂಗ್ರೆಸ್ ಅಥವಾ ವಿರೋಧ ಪಕ್ಷಗಳು ಹೋಗಳುತ್ತವೆಯೇ? ವಿರೋಧ ಮಾಡುವುದೇ ಅವರ ಕೆಲಸ ಅಲ್ಲವೇ. ಆದರೆ ನಮಗೆ ನಮ್ಮ ಸರ್ಕಾರದ ಕೋವಿಡ್ ಹಾಗೂ ಪ್ರವಾಹ ಸಂದರ್ಭದಲ್ಲಿ ಹಾಗೂ ರಾಜ್ಯದ ಏಳಿಗೆಗಾಗಿ ಮಾಡುತ್ತಿರುವ ಕೆಲಸದಲ್ಲಿ ತೃಪ್ತಿ ಇದೆ. ಸದನದಲ್ಲಿಯೂ ಕಾಂಗ್ರೆಸ್ ಅವರಿಗೆ ಸಮರ್ಥವಾಗಿಯೇ ಉತ್ತರ ನೀಡುತ್ತದೆ ಎಂದಿದ್ದಾರೆ.