ಉಡುಪಿ: ಸಚಿವ ಡಿಕೆಶಿ ಆಟ ಇನ್ನು ಹೆಚ್ಚು ದಿನ ನಡೆಯಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಗುಡುಗಿದ ಪೂಜಾರಿ, ಇಡಿ ನೋಟಿಸ್ ಬರುತ್ತದೆ ಎಂಬ ಆತಂಕ ಡಿಕೆ ಶಿವಕುಮಾರ್ ಅವರಿಗಿದೆ. ಅಪಾರ ಅಕ್ರಮ ಸಂಪತ್ತು ಹೊಂದಿರುವ ಕಾರಣ ಅವರ ಮೇಲೆ ಕಾನೂನು ಕ್ರಮ ಜಾರಿಯಾಗಿದೆ. ಆದರೆ ಡಿಕೆ ಬ್ರದರ್ಸ್ ಇನ್ನೂ ಅಧಿಕಾರ ನಡೆಸುವ ಭ್ರಮೆಯಲ್ಲಿದ್ದಾರೆ. ನಮ್ಮ ಬಳಿ ಯಾವುದೇ ಅಕ್ರಮ ಸಂಪತ್ತಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಹಣ ಬಲದಿಂದಲೇ ಅಧಿಕಾರ ನಡೆಸುವ ಭ್ರಮೆ ಅವರಲ್ಲಿದೆ. ಒಂದೊಮ್ಮೆ ಅವರು ಅಕ್ರಮ ಸಂಪತ್ತು ಹೊಂದಿಲ್ಲ ಎನ್ನುವುದಾದರೆ ಕಾನೂನು ಕ್ರಮ ಎದುರಿಸಬೇಕು. ತಪ್ಪು ಮಾಡದಿದ್ದರೆ ಹೆದರುವ ಅವತ್ಯವಿಲ್ಲ ಎಂದು ಹೇಳಿದರು. ಇದನ್ನು ಓದಿ: ಬಿಜೆಪಿ ಅವರೆಲ್ಲ ನನ್ನ ಗೆಳೆಯರು – ಡಿಕೆಶಿ
ಸಚಿವ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಸಂಪತ್ತು ಗಳಿಸಿದ ಆರೋಪ ಮೇಲೆ ಆದಾಯ ತೆರಿಗೆ (ಐಟಿ), ಕಂದಾಯ ಇಲಾಖೆ (ಇಡಿ) ಅಧಿಕಾರಿಗಳು ದಾಳಿ ನಡೆಸಿದೆ. ಡಿಕೆ ಶಿವಕುಮಾರ್ ಅವರ ಮೇಲೆ ಆರೋಪಗಳು ಕೇಳಿ ಬಂದಿದ್ದರೂ ಕಾಂಗ್ರೆಸ್ ಹಾಗೂ ಸಿಎಂ ಕುಮಾರಸ್ವಾಮಿ ಅವರು ಯಾವುದೇ ಕ್ರಮಕೈಗೊಂಡಿಲ್ಲ. ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ ಎಂಬುವುದನ್ನ ಸಾಬೀತುಪಡಿಸಲು ಕೂಡಲೇ ಡಿಕೆಶಿಯನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು. ಇದನ್ನು ಓದಿ: ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ದ್ವೇಷದ ರಾಜಕಾರಣ, ಭಯದಿಂದ ತುರ್ತು ಸುದ್ದಿಗೋಷ್ಠಿ ಕರೆದಿಲ್ಲ: ಡಿಕೆ ಸುರೇಶ್
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv