ಉಡುಪಿ: ಆರೋಗ್ಯ ಇಲಾಖೆಯ ಎನ್‍ಎಚ್‍ಎಂ ಕಾಂಟ್ರ್ಯಾಕ್ಟ್ ಸಿಬ್ಬಂದಿಯ ರಿನಿವಲ್ ಮಾಡುವ ಉದ್ದೇಶದಿಂದ ಏಪ್ರಿಲ್ 1ಕ್ಕೆ 24,000 ವೈದ್ಯಕೀಯ ಸಿಬ್ಬಂದಿಗೆ ರಜೆ ಕೊಡಲಾಗುತ್ತಿದೆ. ಕೊರೊನಾ ಹಾವಳಿ ಇರುವ ಸಂದರ್ಭದಲ್ಲಿ ಕಾನೂನು ಪಾಲನೆ ಎಷ್ಟು ಸರಿ ಎಂಬುದು ಚರ್ಚೆಯಾಗುತ್ತಿದೆ.
ಈ ನಡುವೆ ಇದು ನಿಯಮ ಕಾಯ್ದೆ ನೋಡುವ ಕಾಲ ಅಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಅವರೊಂದಿಗೆ ಚರ್ಚೆ ನಡೆಸುವುದಾಗಿ ಮೀನುಗಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
Advertisement
Advertisement
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಕೊರೊನಾ ಎಮರ್ಜೆನ್ಸಿ ಇದೆ. ಒಂದು ದಿನ ರಜೆ ಕೊಡದಿದ್ದರೆ ಬೇರೆ ದಾರಿ ಇಲ್ಲ. ಎಪ್ರಿಲ್ 1ಕ್ಕೆ ಕೆಲಸಕ್ಕೆ ಬರುತ್ತೇವೆ ಸಂಬಳ ಕೊಡಿ ಎಂದು ಸಿಬ್ಬಂದಿ ಕೇಳಿದ್ದಾರೆ. ರಜೆ ಮತ್ತು ಸಂಬಳ ಕೊಡುವ ವಿಚಾರದಲ್ಲಿ ತಾಂತ್ರಿಕ ಸಮಸ್ಯೆ ಇದೆ. ಕೊರೊನಾ ಬಾಧಿಸಿರುವ ಸಂದರ್ಭ ಕಾನೂನು ಕಾಯಿದೆ ನಿಯಮ ನೋಡಿಕೊಂಡು ಇರಲು ಸಾಧ್ಯವಿಲ್ಲ. ಇದು ವಾದ ಮಾಡುವ ಸಮಯವಲ್ಲ. ರಾಜ್ಯಕ್ಕೆ ಸಮಸ್ಯೆಯಾಗದ ರೀತಿಯಲ್ಲಿ ಗೊಂದಲವನ್ನು ನಿವಾರಿಸಲಾಗುವುದು ಎಂದು ತಿಳಿಸಿದರು.