ಉಡುಪಿ: ಹೆದ್ದಾರಿಯಲ್ಲಿ ಡಿವೈಡರ್ ಮೇಲೆ ಏರಿದ ಟಿಪ್ಪರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಟಿಪ್ಪರ್ ಅಡಿಯಲ್ಲಿ ಸಾವು – ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕಾರ್ಮಿಕನನ್ನು ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.
ಉಡುಪಿ ಜಿಲ್ಲೆ ಕೆ.ಜಿ ರೋಡ್ ಸಮೀಪ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿದೆ. ಪರಿಣಾಮ ಟಿಪ್ಪರ್ ಅಡಿ ಇಬ್ಬರು ವ್ಯಕ್ತಿ ಸಿಲುಕಿದ್ದರು. ಡಿಕ್ಕಿಯಾದ ರಭಸಕ್ಕೆ ಒಬ್ಬ ಟಿಪ್ಪರ್ ಅಡಿಗೆ ಎಸೆಯಲ್ಪಟ್ಟಿದ್ದ. ಈ ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಟಿಪ್ಪರ್ ಒಳಗಿದ್ದ ಇಬ್ಬರು ಸಿಕ್ಕಿಹಾಕಿಕೊಂಡು ಒದ್ದಾಡುತ್ತಿದ್ದರು. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಇದೇ ರಸ್ತೆಯಲ್ಲಿ ಹೋಗುತ್ತಿದ್ದರು.
Advertisement
Advertisement
ಈ ಸಂದರ್ಭ ಅಪಘಾತವಾದ ಸ್ಥಳದಲ್ಲಿ ಕೋಟ ಶ್ರೀನಿವಾಸ ಪೂಜಾರಿ ತುರ್ತು ಕಾರ್ಯಾಚರಣೆ ಕೈಗೊಂಡರು. ಫೋನ್ ಮಾಡಿ ಕ್ರೈನ್, ಅಂಬುಲೆನ್ಸ್ ಸ್ಥಳಕ್ಕೆ ಕರೆಸಿದ್ದಾರೆ. ಸಾರ್ವಜನಿಕರನ್ನು ಒಟ್ಟು ಮಾಡಿ ಇಬ್ಬರು ಕಾರ್ಮಿಕರ ಪ್ರಾಣ ರಕ್ಷಣೆಗೆ ಮುಂದಾಗಿದ್ದಾರೆ. ಅಲ್ಲದೆ ಇಬ್ಬರು ಕಾರ್ಮಿಕರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಶೀಘ್ರ ಚಿಕಿತ್ಸೆ ನೀಡಿದ್ದರಿಂದ ಟಿಪ್ಪರ್ ಅಡಿಯಲ್ಲಿ ಸಿಲುಕಿದ್ದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಅಪಘಾತದಲ್ಲಿ ಭಟ್ಕಳ ಮೂಲದ ಕುಮಾರ್, ಗಾಯಾಳು ಕುಂದಾಪುರದ ನಾಗರಾಜ್ ಇಬ್ಬರು ಸಾವನ್ನಪ್ಪಿದ್ದಾರೆ.
Advertisement
Advertisement
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ, ಅಪಘಾತವಾದಾಗ ಸ್ಥಳದಲ್ಲಿ ಹಾದು ಹೋಗುತ್ತಿದ್ದೆ. ಕೂಡಲೇ ತುರ್ತು ಕಾರ್ಯಕ್ಕೆ ಆದೇಶ ಮಾಡಿದ್ದೇನೆ. ಮನುಷ್ಯನಾಗಿ ಇನ್ನೊಬ್ಬ ಮನುಷ್ಯನಿಗೆ ಸಹಾಯ ಮಾಡಿದ್ದೇನೆ ಅಷ್ಟೇ. ಇದರಲ್ಲಿ ಹೆಚ್ಚುಗಾರಿಕೆ ಏನಿಲ್ಲ. ಸಂಚಾರದ ನಿಯಮಗಳನ್ನು ಚಾಲಕರು ಪಾಲಿಸಬೇಕು. ಅದು ಮಳೆಗಾಲದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]