ಮಂಗಳೂರು: ಇಲ್ಲಿನ ಕೋಟೆಕಾರು ಬ್ಯಾಂಕ್ ದರೋಡೆ (Kotekar Bank Robbery) ಪ್ರಕರಣದಲ್ಲಿ ಮುಂಬೈ ಮೂಲದ ಆರೋಪಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.
ಮುಂಬೈ ಮೂಲದ ಆರೋಪಿ ಕಣ್ಣನ್ ಮಣಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ತಮಿಳುನಾಡಿನಿಂದ ಮಂಗಳೂರಿಗೆ (Mangaluru) ಕರೆತಂದು ಪೊಲೀಸರು ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಆರೋಪಿ ಕಣ್ಣನ್ ತಪ್ಪಿಸಿಕೊಳ್ಳಲು ಯತ್ನಿಸಿದ. ಇದನ್ನೂ ಓದಿ: Kotekar Bank Robbery | ಬ್ಯಾಂಕ್‌ನಲ್ಲಿ ಚಿನ್ನ ದೋಚಲು ನಮಾಜ್ ಟೈಂ ಸೂಚಿಸಿದ್ದೇ ಆ ಸ್ಥಳೀಯ ವ್ಯಕ್ತಿ – ರಹಸ್ಯ ಸ್ಫೋಟ
ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯ ಅಲಂಕಾರು ಗುಡ್ಡದಲ್ಲಿ ಶೂಟೌಟ್ ಘಟನೆ ನಡೆದಿದೆ. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಣ್ಣನ್ ಮಣಿ ಮೇಲೆ ಶೂಟೌಟ್ ಮಾಡಲಾಗಿದೆ.
ನಿನ್ನೆ ತಮಿಳುನಾಡಿನ ತಿರುವನ್ನಲಿಯ ಪದ್ಮನೇರಿ ಗ್ರಾಮವೊಂದರಲ್ಲಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸದ್ಯ ದೇರಳಟ್ಟೆಯ ಖಾಸಗಿ ಆಸ್ಪತ್ರೆಗೆ ಆರೋಪಿಯನ್ನು ದಾಖಲಿಸಲಾಗಿದೆ. ಸಿಸಿಬಿ ಇನ್‌ಸ್ಪೆಕ್ಟರ್ ರಫೀಕ್ ಫೈರಿಂಗ್ ಮಾಡಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಸಾಲುಸಾಲು ದರೋಡೆ – ಜಿಲ್ಲೆಗಳಲ್ಲಿ ಪೊಲೀಸರು ಹೈಅಲರ್ಟ್, ಮುನ್ನೆಚ್ಚರಿಕೆಗೆ ಭದ್ರತಾ ಪಾಠ