ಬೆಂಗಳೂರಿನ ಭೂಗತ ದೊರೆ ಎಂದೇ ಬಿಂಬಿತವಾಗಿದ್ದ ಕೊತ್ವಾಲ್ ರಾಮಚಂದ್ರಪ್ಪ (Kotwal Ramachandrappa)ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ (D.K.Shivakumar)ಅವರ ನಡುವೆ ಬಾಂಧವ್ಯವಿತ್ತು. ಡಿಕೆಶಿ ಅವರು ಕೊತ್ವಾಲ್ ಶಿಷ್ಯ ಎಂದು ಹಲವಾರು ಬಾರಿ, ಅನೇಕ ರಾಜಕಾರಣಿಗಳು ಆಡಿದ್ದು ಇದೆ. ಹೀಗಾಗಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಈ ಕುರಿತು ಪ್ರಸ್ತಾಪ ಆಗಬಹುದೆ? ಎನ್ನುವ ಪ್ರಶ್ನೆ ಉದ್ಭವವಾಗಿತ್ತು. ಕೊತ್ವಾಲ್ ಮತ್ತು ಡಿಕೆಶಿ ನಡುವಿನ ಸಂಬಂಧ ಯಾವ ರೀತಿಯದ್ದು ಎನ್ನುವ ಕುತೂಹಲ ಕೂಡ ವ್ಯಕ್ತವಾಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.
Advertisement
ವೀಕೆಂಡ್ ವಿತ್ ರಮೇಶ್ (Weekend with Ramesh) ಕಾರ್ಯಕ್ರಮಕ್ಕೆ ಆಗಮಿಸಿದ್ದ ಪರಮೇಶ್ ಎನ್ನುವವರು ಈ ಕುರಿತು ನೆನಪುಗಳನ್ನು ಹೊರಹಾಕಿದರು. ಡಿ.ಕೆ.ಶಿವಕುಮಾರ್ ಬಗ್ಗೆ ಏನೇನೋ ಮಾತಾಡ್ತಾರೆ. ರೌಡಿ ಎಂದೆಲ್ಲ ಹೇಳುತ್ತಾರೆ. ಅದೆಲ್ಲವೂ ಸುಳ್ಳು. ಜನರಲ್ ಹಾಸ್ಟೇಲ್ ನಲ್ಲಿ ಎಲ್.ಎನ್. ಮೂರ್ತಿ ಅವರು ಇರುತ್ತಿದ್ದರು. ನಾವೆಲ್ಲ ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೆವು. ಆಗಾಗ್ಗೆ ಅಲ್ಲಿಗೆ ಕೊತ್ವಾಲ ಕೂಡ ಬರುತ್ತಿದ್ದರು. ಆಗ ಮಾತನಾಡಿಸುತ್ತಿದ್ದರು. ಸ್ವತಃ ಅವರೇ ನಮಗೆ ಹೇಳುವವರು, ನೀವು ನಾಯಕರಾಗುವವರು, ನಮ್ಮಂಥವರೊಟ್ಟಿಗೆ ಕಾಣಿಸಿಕೊಳ್ಳಬೇಡಿ ಎನ್ನುತ್ತಿದ್ದರು’ ಎಂದು ಹೇಳಿದ್ದಾರೆ.
Advertisement
Advertisement
ಡಿ.ಕೆ. ಶಿವಕುಮಾರ್ ಹತ್ತು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ತಮ್ಮ ಆಹಾರ ಕ್ರಮ ಮತ್ತು ತಮಗಿಷ್ಟವಾದ ಊಟದ ಬಗ್ಗೆಯೂ ಹೇಳಿಕೊಂಡಿದ್ದಾರೆ. ಅಚ್ಚರಿಯ ಸಂಗತಿ ಅಂದರೆ, ಡಿಕೆಶಿ ಇದೀಗ ಅಪ್ಪಟ ಸಸ್ಯಹಾರಿಯಂತೆ. ಜೈಲಿನಿಂದ ಬಂದ ನಂತರ ನಾನ್ ವೆಜ್ ತ್ಯೆಜಿಸಿರುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ ಮಶ್ರೂಮ್ ಮತ್ತು ಕಡೆಲೆಕಾಯಿ ಅಂದರೆ ಡಿಕೆಶಿಗೆ ಪ್ರಾಣ ಎಂದು ಡಿಕೆಶಿ ಪತ್ನಿ ಉಷಾ ತಿಳಿಸಿದ್ದಾರೆ. ಇದನ್ನೂ ಓದಿ:ಕರಿಹೈದ ಕೊರಗಜ್ಜ: ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ಬದುಕಿನ ಹಾದಿ
Advertisement
ಶಿಕ್ಷಣ ಮತ್ತು ರಾಜಕಾರಣದ ಬಗ್ಗೆಯೂ ಅವರು ಮಾತನಾಡಿದ್ದು, ನಾನು 7ನೇ ತರಗತಿಯಲ್ಲಿ ಇರುವಾಗಲೇ ರಾಜಕಾರಣಿ ಆಗಬೇಕು ಎಂದು ತೀರ್ಮಾನ ಮಾಡಿದ್ದೆ ಎಂದು ಡಿಕೆಶಿ ಅವರು ಹೇಳಿದ್ದಾರೆ. ಬಳಿಕ ಡಿಕೆಶಿ, ಒಬ್ಬ ಒಳ್ಳೆಯ ಆಡಳಿತಗಾರ ಎಂದು ಸಿಎಂ ಸಿದ್ಧರಾಮಯ್ಯ ಬಣ್ಣಿಸಿದ್ದಾರೆ. ಹೊರಗಡೆ ಅವರು ತುಂಬಾ ಟಫ್ ವ್ಯಕ್ತಿ, ಆದರೆ ಮನೆಯಲ್ಲಿ ಅವರು ತುಂಬಾ ಎಮೋಷನಲ್ ಎಂದು ಡಿಕೆಶಿ ಪತ್ನಿ ಮಾತನಾಡಿದ್ದಾರೆ. ಪುತ್ರಿ, ನನ್ನ ತಂದೆಯೇ ನನ್ನ ಹೀರೋ ಎಂದು ಹೆಮ್ಮೆಯಿಂದ ಪ್ರತಿಕ್ರಿಯೆ ನೀಡಿದ್ದಾರೆ. ರಾಜೀವ್ ಗಾಂಧಿ ಅವರು ನನ್ನ ನೋಡಿದ್ದರು. ಯೂ ಆರ್ ಸೆಲೆಕ್ಟೆಟೆಡ್ ಫಾರ್ ವರ್ಲ್ಡ್ ಯೂತ್ ಸ್ಟುಡೆಂಟ್ ಫೆಸ್ಟಿವಲ್ ಅಂದ್ರು. ಬೈ ಬರ್ತ್ ನಾನೊಬ್ಬ ರೈತ, ಆದರೆ ನನ್ನ ಆಸಕ್ತಿ ಇರೋದು ರಾಜಕಾರಣದಲ್ಲಿ ಎಂದು ಡಿಕೆಶಿ ಅವರು ವೀಕೆಂಡ್ ವಿತ್ ರಮೇಶ್‌ನಲ್ಲಿ ಮಾತನಾಡಿದ್ದಾರೆ. ಈ ಕುರಿತ ಪ್ರೋಮೋ ನೆಟ್ಟಿಗರ ಗಮನ ಸೆಳೆಯುತ್ತಿದೆ.
ಈ ಶನಿವಾರ- ಭಾನುವಾರ ಪ್ರಸಾರವಾದರೆ ಜನಪ್ರಿಯ ಟಾಕ್ ಶೋ ವೀಕೆಂಡ್ ವಿತ್ ರಮೇಶ್ (Weekend with Ramesh) ಮುಕ್ತಾಯವಾಗಲಿದೆ. ಈ ಬಾರಿ ಅತೀ ವೇಗದಲ್ಲಿ ಈ ಕಾರ್ಯಕ್ರಮವನ್ನು ಮುಗಿಸಿದೆ ಜೀ ಕನ್ನಡ ವಾಹಿನಿ. ಮೊದಲ ಸೀಸನ್ ನಿಂದ ಈ ಸೀಸನ್ ವರೆಗೂ ಒಟ್ಟು 100 ಸಾಧಕರು ವೀಕೆಂಡ್ ಕುರ್ಚಿ ಮೇಲೆ ಕೂತು ತಮ್ಮ ಸಾಧನೆಯನ್ನು ಮೆಲುಕು ಹಾಕಿಕೊಂಡಿದ್ದಾರೆ. ವೀಕೆಂಡ್ ಟೆಂಟ್ ನಲ್ಲಿ ಕೂತು ತಮ್ಮ ಬದುಕನ್ನು ರಿವೈಂಡ್ ಮಾಡಿ ನೋಡಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಪಿಸೋಡ್ ಮೂಲಕ ಈ ಸೀಸನ್ ಮುಗಿಯಲಿದೆ.
ಡಿಕೆಶಿ ಅವರ ಎಪಿಸೋಡ್ ನ ಪ್ರೊಮೋನಲ್ಲೇ ‘ಗ್ರ್ಯಾಂಡ್ ಫಿನಾಲೆ’ (Grand Finale)ಎಂದು ಹಾಕಲಾಗಿದೆ. ಸಾಧಕರ ಸೀಟಿನಲ್ಲಿ ಕುಳಿತಿರುವ ಡಿ.ಕೆ. ಶಿವಕುಮಾರ್ (D.K. Shivakumar) ತಮ್ಮ ಬದುಕನ್ನು ವೀಕೆಂಡ್ ಟೆಂಟ್ ನಲ್ಲಿ ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಕೇವಲ ಶಿವಕುಮಾರ್ ಮಾತ್ರವಲ್ಲ, ಅವರ ಪತ್ನಿ, ಮಕ್ಕಳು, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಂಡಿದ್ದು, ಅವರೆಲ್ಲರೂ ಡಿಕೆಶಿ ಬದುಕಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.