ರಾಯಚೂರು: ಹೈಕಮಾಂಡ್ ಅವಕಾಶ ಕೊಟ್ಟರೇ ನಾವು ಸಿದ್ದರಾಮೋತ್ಸವಕ್ಕಿಂತಲೂ ಹೆಚ್ಚು ಜನರನ್ನು ಸೇರಿಸುತ್ತೇವೆ ಎಂದು ಬಿಜೆಪಿ ಎಂಎಲ್‍ಸಿ ಕೆ.ಪಿ. ನಂಜುಂಡಿ ಅಭಿಪ್ರಾಯಪಟ್ಟಿದ್ದಾರೆ.
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮೋತ್ಸವ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದು ಸಿದ್ದರಾಮಯ್ಯರ ಅಭಿಮಾನಿಗಳು ಅಲ್ಲ. ಇಡೀ ಪಕ್ಷ. ನನ್ನ ಪ್ರಕಾರ ಸಿದ್ದರಾಮೋತ್ಸವಕ್ಕೆ ಜನಸಂಖ್ಯೆ ಕಡಿಮೆ ಬಂದಿತ್ತು. 224 ಕ್ಷೇತ್ರದ ದೊಡ್ಡ ದೊಡ್ಡ ನಾಯಕರು ಸಮಿತಿಯಲ್ಲಿ ಇದ್ದರು. ಎಲ್ಲರೂ ಸೇರಿ ಸಿದ್ದರಾಮಯ್ಯ ಹುಟ್ಟುಹಬ್ಬ ಮಾಡಿದ್ದಾರೆ. ಅದು ದೊಡ್ಡ ವಿಷಯವೇ ಅಲ್ಲ. ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಒಗ್ಗಟ್ಟು ಪ್ರದರ್ಶನ ವಿಧಾನ ಸರಿಯಾಗಿ ಇರಲಿಲ್ಲ. ರಾಹುಲ್ ಗಾಂಧಿ ತಬ್ಬಿಕೊಳ್ಳಲು ಹೇಳಿದರು. ರಾಹುಲ್ ಗಾಂಧಿ ಹೇಳದೆ ಅವರು ತಬ್ಬಿಕೊಂಡಿದ್ದರೆ ಜನರು ಒಗ್ಗಟ್ಟಾಗಿದ್ದಾರೆ ಎಂದು ಭಾವಿಸುತ್ತಿದ್ದರು ಎಂದಿದ್ದಾರೆ. ಇದನ್ನೂ ಓದಿ: ಕೆಂಪು, ಬಿಳಿ, ಹಸಿರು ಎಂದು ಬಾವುಟದ ಬಣ್ಣ ತಪ್ಪಾಗಿ ಹೇಳಿದ ಸಿದ್ದರಾಮಯ್ಯ
ನಮಗೆ ಹೈಕಮಾಂಡ್ ಅವಕಾಶ ಕೊಟ್ಟು ಕಾರ್ಯಕ್ರಮ ಮಾಡಲು ಹೇಳಿದರೆ ನಮ್ಮ ಶಕ್ತಿಯ ಪ್ರದರ್ಶನ ಮಾಡುತ್ತೇವೆ ಎಂದರು. ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ವಿಚಾರವಾಗಿ ಮಾತನಾಡಿ, ಸಿಎಂ ಬದಲಾವಣೆ ಒಂದು ಗಾಸಿಪ್. ಸಿಎಂ ಬೊಮ್ಮಾಯಿ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಈ ಅವಧಿ ಮುಗಿಯುವವರೆಗೂ ಸಿಎಂ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಹೇಳಿಕೆಯೂ ಕೇವಲ ಬಾಯಿಚಪಲ ಇದ್ದಂತೆ ಎಂದು ಖಾರವಾಗಿ ಉತ್ತರಿಸಿದ್ದಾರೆ. ಇದನ್ನೂ ಓದಿ: 9 ವರ್ಷಗಳ ಹಿಂದೆ ಕಿಡ್ನ್ಯಾಪ್ ಆಗಿದ್ದ ಬಾಲಕಿ ಪೋಸ್ಟರ್ ಸಹಾಯದಿಂದ ಹೆತ್ತವರ ಮಡಿಲಿಗೆ