ಬೆಂಗಳೂರು: ಕಾರ್ಮಿಕರ ಕಾನೂನು ಹಾಗೂ ವಿವಿಧ ಬೇಡಿಕೆ ಈಡೇರಿಕೆ ಸಂಬಂಧವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬಂದ್‍ಗೆ ನಮ್ಮ ಬೆಂಬಲವೂ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಆದ್ದರಿಂದ ಕಾರ್ಮಿಕ ಸಂಘಟನೆಗಳು ಕೇಂದ್ರದ ಧೋರಣೆ ವಿರುದ್ಧ ಬಂದ್‍ಗೆ ಕರೆ ನೀಡಿದೆ. ಆದ್ದರಿಂದ ನಮ್ಮ ಬೆಂಬಲವೂ ಬಂದ್‍ಗೆ ಇದೆ ಎಂದು ತಿಳಿಸಿದರು.
Advertisement
Advertisement
ಬೀದಿ ರಂಪಾಟವಲ್ಲ: ಇದೇ ವೇಳೆ ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಎರಡು ಪಕ್ಷದ ಮುಖಂಡರು ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿದೆ. ಇದನ್ನು ಬಹಿರಂಗವಾಗಿ ಮಾಧ್ಯಮಗಳ ಮೂಲಕ ಚರ್ಚೆ ಮಾಡಿ ಬೀದಿ ರಂಪಾಟ ಮಾಡುವ ವಿಷಯವಲ್ಲ ಎಂದರು. ಇದನ್ನು ಓದಿ: ಮೈತ್ರಿ ಮಾಡೋದ್ರಲ್ಲಿ ಜೆಡಿಎಸ್ ಅವರೇ ಬೆಸ್ಟ್: ಸುಧಾಕರ್ ವ್ಯಂಗ್ಯ
Advertisement
ನಮ್ಮ ಪಕ್ಷದ ತೀರ್ಮಾನವನ್ನು ಈಗಾಗಲೇ ನಾವು ಹೇಳಿದ್ದೇವೆ. ಮುಂದಿನ ಹಂತದಲ್ಲಿ ಈ ಬಗ್ಗೆ ಸಮನ್ವಯದಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು. ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ವಿಚಾರ ಜನರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ವಿಷಯವಲ್ಲ. ಇದು ಎರಡು ಪಕ್ಷಗಳ ವಿಚಾರವಾಗಿದ್ದು, ಕುಳಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುತ್ತೇವೆ. ಆದರೆ ಇದರಿಂದ ಮೈತ್ರಿ ಧರ್ಮಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಸಮ್ಮಿಶ್ರ ಸರ್ಕಾರ 5 ವರ್ಷ ಪೂರ್ಣಗೊಳಿಸುತ್ತದೆ. ಕಾಂಗ್ರೆಸ್ ಪಕ್ಷ ಮೈತ್ರಿ ಧರ್ಮ ಪಾಲನೆ ಮಾಡದ ಪಕ್ಷವಲ್ಲ. ಸಿಎಂ ಕುಮಾರಸ್ವಾಮಿ ಅವರಿಗೆ ಸಂಪೂರ್ಣ ಬೆಂಬಲ ನೀಡಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಗೂ ಕೂಡ ಮೈತ್ರಿ ಧರ್ಮದ ಮೂಲವೇ ಸಾಗಿ ಹೋರಾಟ ನಡೆಸಬೇಕಿದೆ ಎಂದು ತಿಳಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv