ಬೆಂಗಳೂರು: ಜೆಡಿಎಸ್ ಗೆ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಜೆಡಿಎಸ್ ಇತಿಹಾಸವನ್ನ ನೋಡಿದ್ದು, ಹೊಂದಾಣಿಕೆಗೆ ಇವತ್ತು ಸಿದ್ಧರಾಗಿದ್ದಾರೆ. ಹಿಂದೆ ಬಿಜೆಪಿ ಜೊತೆ ಹೋಗಿ ಜೆಡಿಎಸ್ ಗೆ ಅಭ್ಯಾಸವಿದೆ. ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವೆ ನಡೆಯುತ್ತಿರುವ ಬೆಳವಣಿಗೆ ನೋಡೋದಾದರೆ ಯಾರು ತಪ್ಪು ಮಾಡಿದ್ದಾರೆ ಅನ್ನೋದು ಜನರಿಗೆ ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜೆಡಿಎಸ್ ವಿರುದ್ಧ ಗುಡುಗಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ದಿನೇಶ್ ಗುಂಡೂರಾವ್, ಜೆಡಿಎಸ್ ಸಮಯಕ್ಕೆ ಯಾವುದು ಅನಕೂಲವಾಗುತ್ತೆ ಆ ನಿರ್ಣಯ ತೆಗೆದುಕೊಳ್ಳುತ್ತದೆ. ಕಾಂಗ್ರೆಸ್ ಕೆಲ ತತ್ವ ಸಿದ್ಧಾಂತಗಳನ್ನು ಹೊಂದಿದ್ದು ನಮ್ಮ ನಿಲುವು ಒಂದೇ ಆಗಿರುತ್ತದೆ. ಜೆಡಿಎಸ್ ಗೆ ಜಾತ್ಯಾತೀತ ನಿಲುವುಗಳು ಇಲ್ಲದೇ ಇರೋದರಿಂದ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗುತ್ತಿದೆ. ಕುಮಾರಸ್ವಾಮಿಯವರ ಹೇಳಿಕೆಗಳಿಗೆ ಪ್ರತಿಕ್ರಿಯೆ ಕೊಡುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.
Advertisement
Advertisement
ಜೆಡಿಎಸ್ ಶಕ್ತಿ ಸೀಮಿತವಾಗಿದ್ದು, ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಜನರಿಗೆ ಅತಂತ್ರ ಸರ್ಕಾರ ಬರಬಾರದು ಎಂಬ ಆಸೆ ಇದೆ. ಹಾಗಾಗಿ ಕಾಂಗ್ರೆಸ್ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲು ಪ್ರಯತ್ನ ಮಾಡುತ್ತಿದೆ. ನಾವು ಸಹ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.