ಬೆಂಗಳೂರು: ನನ್ನಿಂದ ತಪ್ಪಾಗಿದೆ. ನಂಗೆ ಡಿಕೆಶಿ ಮುಖನೋಡಲು ಆಗುತ್ತಿಲ್ಲ ಎಂದು ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಕಣ್ಣೀರು ಹಾಕಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನಗೆ ಜೀವ ಭಯ ಇದೆ. ಹೆಂಡತಿ ಮಕ್ಕಳಿದ್ದಾರೆ ತೊಂದರೆ ಮಾಡಬೇಡಿ. ಡಿಕೆಶಿವಕುಮಾರ್ ದೇವರಂತ ಮನುಷ್ಯ. ಅವರಿಗೆ ನೋವಾಗಿದೆ ಕ್ಷಮೆ ಕೇಳುತ್ತೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Advertisement
Advertisement
ಯಾವ ಶಿಕ್ಷೆ ಬೇಕಾದ್ರೂ ಕೊಡಲಿ. ಪ್ರಾಣ ಬೇಕಾದ್ರೂ ತೆಗೆಯಲಿ. ನನ್ನ ಎಲ್ಲಾ ರಾಜಕೀಯ ಜೀವನ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ನನ್ನನ್ನು ನನ್ನ ಪಾಡಿಗೆ ಬದುಕಲು ಬಿಟ್ಟು ಬಿಡಿ. ನನ್ನಿಂದ ತಪ್ಪಾಗಿದೆ. ಎಮೋಷನಲ್ ಆಗಿ ಮಾತನಾಡಿದ್ದೀನಿ ಎಂದು ಸಲೀಂ ಕಣ್ಣೀರು ಸುರಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನಿಂದ ಸಲೀಂ 6 ವರ್ಷ ಉಚ್ಚಾಟನೆ- ಉಗ್ರಪ್ಪಗೆ ಶೋಕಾಸ್ ನೋಟಿಸ್ ಜಾರಿ
Advertisement
Advertisement
ನನಗೆ ಡಿಕೆ ಸಾಕಷ್ಟು ಸಹಾಯ ಮಾಡಿದ್ದಾರೆ. ಅವರಿಗೆ ಕ್ಷಮೆ ಕೇಳುತ್ತೇನೆ. ಅವರ ಮುಖ ನೋಡಲು ನನಗೆ ಆಗಲ್ಲ. ಇನ್ನು ಕೆಪಿಸಿಸಿ ಕಚೇರಿಗೆ ಬರಲು ಆಗಲ್ಲ. ಹೊರಗಿದ್ದುಕೊಂಡೇ ಕಾಂಗ್ರೆಸ್ ಸೇವೆ ಮಾಡುತ್ತೇನೆ. ನನ್ನಿಂದ ತಪ್ಪಾಗಿದೆ. ಪಕ್ಷದಿಂದ ಉಚ್ಚಾಟನೆ ಮಾಡೋ ಮುನ್ನ ಒಂದು ನೋಟಿಸ್ ಆದ್ರೂ ಕೊಡಬಹುದಿತ್ತು ಎಂದು ಹೇಳಿದರು. ಇದನ್ನೂ ಓದಿ: ಪರ್ಸಂಟೇಜ್ ಆರೋಪ – ನನಗೂ, ಪಕ್ಷಕ್ಕೂ ಸಂಬಂಧವಿಲ್ಲದ ವಿಚಾರ ಅಂದ್ರು ಡಿಕೆಶಿ
ಸಲೀಂ ಹೇಳಿದ್ದೇನು..?
ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಡಿಕೆಶಿ ಆಪ್ತ ಸಲೀಂ ಹಾಗೂ ಸಂಸದ ಉಗ್ರಪ್ಪ ನಡುವೆ ಸಂಭಾಷಣೆ ನಡೆದಿದೆ. ಡಿಕೆಶಿ ಅವರು ಕಲೆಕ್ಷನ್ ಗಿರಾಕಿ ಎಂದು ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹೇಳಿರುವುದು ಇದೀಗ ಭಾರೀ ಚರ್ಚೆಯಾಗಿತ್ತು. ಜಲಸಂಪನ್ಮೂಲ ಇಲಾಖೆಯಲ್ಲಿ ಹೇಗೆ ಪರ್ಸಂಟೇಜ್ ಫಿಕ್ಸಾಗುತ್ತೆ ಎಂದು ಮಾತನಾಡಿಕೊಂಡಿದ್ದಾರೆ. ಡಿ.ಕೆ ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದಾಗ ಪರ್ಸಂಟೇಜ್ ಹೇಗೆ ಹಚ್ಚಾಯ್ತು..?, ಜಲಸಂಪನ್ಮೂಲ ಇಲಾಖೆಯಲ್ಲಿ ಮೊದಲೆಲ್ಲಾ 6 ರಿಂದ 8 ಪರ್ಸೆಂಟ್ ಇತ್ತು. ಡಿಕೆಶಿ ಬಂದ ಮೇಲೆ 12 ಪರ್ಸೆಂಟ್ ಮಾಡಿದರು ಎಂದು ಸಲೀಂ ಅವರು ಉಗ್ರಪ್ಪ ಬಳಿ ಹೇಳಿದ್ದರು. ಇದನ್ನೂ ಓದಿ: ಡಿಕೆಶಿಯನ್ನು 4 ದಶಕಗಳಿಂದ ಬಲ್ಲೆ, ಒಬ್ಬ ಒಳ್ಳೆಯ ಆಡಳಿತಗಾರ: ಉಗ್ರಪ್ಪ
ಇದೇ ವೇಳೆ ಜಲ ಸಂಪನ್ಮೂಲ ಇಲಾಖೆಯ ಕಾಂಟ್ರಾಕ್ಟರ್ ಗಳಾಗಿರುವ ಉಪ್ಪಾರ್, ಜೀ.ಶಂಕರ್ ಹನುಮಂತಪ್ಪರ ಬಗ್ಗೆಯು ಪ್ರಸ್ತಾಪ ಮಾಡಿದ್ದಾರೆ. ವಾರದ ಹಿಂದೆ ಈ ಕಾಂಟ್ರಕ್ಟರ್ ಗಳ ಮೇಲೆ ಐಟಿ ದಾಳಿ ನಡೆದಿತ್ತು. ಪ್ರೆಸ್ ಮೀಟ್ ಗೂ ಮುನ್ನ ಈ ವಿಚಾರದ ಬಗ್ಗೆ ಸಲೀಂ ಹಾಗೂ ಉಗ್ರಪ್ಪ ಚರ್ಚೆ ನಡೆಸಿದ್ದರು. ಡಿ.ಕೆ.ಶಿವಕುಮಾರ್ ಜಲ ಸಂಪನ್ಮೂಲ ಸಚಿವರಾಗಿದ್ದಾಗಲೂ ಇದೆ ಕಾಂಟ್ರಾಕ್ಟರ್ ಗಳು ಇದ್ದರು. ಡಿಕೆಶಿ ಆಪ್ತ ಮುಳಗುಂದ ಸಾಕಷ್ಟು ದುಡ್ಡು ಮಾಡಿದ್ದಾರೆ. ಮುಳಗುಂದ 50-100 ಕೋಟಿ ಮಾಡಿದ್ದಾನೆ ಅಂದ್ರೆ ಡಿಕೆ ಹತ್ತಿರ ಎಷ್ಟಿರಬೇಕು ಲೆಕ್ಕ ಹಾಕಿ. ಡಿಕೆ ಬರೀ ಕಲೆಕ್ಷನ್ ಗಿರಾಕಿ ಎಂದಿದ್ದರು. ಇದನ್ನೂ ಓದಿ: ಕೈ ನಾಯಕರಿಂದ್ಲೇ ಡೀಲ್ ರಹಸ್ಯ ಬಯಲು – ಡಿಕೆಶಿಗೆ ಬಿಜೆಪಿ ತಿರುಗೇಟು