ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಹೈಕಮಾಂಡ್ ಆಯ್ಕೆ ಮಾಡಿದೆ. ಕಾಂಗ್ರೆಸ್ ಹೈಕಮಾಂಡ್‍ನಿಂದ ಅಧಿಕೃತ ಘೋಷಣೆ ಹೊರ ಬಂದಿದ್ದು, ಇಷ್ಟು ದಿನಗಳ ತೆರೆಮರೆಯ ಆಟಗಳಿಗೆ ತೆರೆ ಬಿದ್ದಿದೆ.
Advertisement
ಮಾಜಿ ಸಿಎಂ ಸಿದ್ದರಾಮಯ್ಯನವರೇ ಶಾಸಕಾಂಗ ಸಭೆಯ ನಾಯಕ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನಗಳಲ್ಲಿ ಮುಂದುವರಿಯಲಿದ್ದಾರೆ. ಉಪಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು. ರಾಜೀನಾಮೆ ಬಳಿಕ ತೆರವಾದ ಸ್ಥಾನಗಳಿಗಾಗಿ ಕಾಂಗ್ರೆಸ್ ನಲ್ಲಿಯೇ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು.
Advertisement
Advertisement
ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ್, ಮಾಜಿ ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರು ವಿಪಕ್ಷ ನಾಯಕನ ಸ್ಥಾಣದ ಮೇಲೆ ಕಣ್ಣಿಟ್ಟಿದ್ರು. ಇತ್ತ ಮಾಜಿ ಸಚಿವ ಎಂ.ಬಿ.ಪಾಟೀಲ್ ಮತ್ತು ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪರ ಹೆಸರು ಕೆಪಿಸಿಸಿ ಅಧ್ಯಕ್ಷರ ರೇಸ್ ನಲ್ಲಿ ಬಲವಾಗಿ ಕೇಳಿ ಬಂದಿದ್ದವು.
Advertisement
ಕಾರ್ಯಕಾರಿ ಅಧ್ಯಕ್ಷರನ್ನಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಅವರನ್ನು ನೇಮಕ ಮಾಡಲಾಗಿದೆ.
INC COMMUNIQUE
Important Notification regarding appointment of PCC President and Working Presidents for Karnataka Pradesh Congress Committee. pic.twitter.com/txkxdUWtwJ
— INC Sandesh (@INCSandesh) March 11, 2020
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಲ್ಪ ಮತಕ್ಕೆ ಕುಸಿದ ಬೆನ್ನಲ್ಲೇ ಹೈಕಮಾಂಡ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಹೈಕಮಾಂಡ್ ಸಂಪರ್ಕಿಸಿ ಮನ ಒಲಿಸುವಂತೆ ಕೇಳಿಕೊಂಡಿತ್ತು. ಆದರೆ ಡಿಕೆ ಶಿವಕುಮಾರ್ ನನ್ನಿಂದ ಸಾಧ್ಯವಿಲ್ಲ ಎಂದು ನೇರವಾಗಿ ಹೇಳಿದ್ದರು ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು.
ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿಯವರು ನೂತನವಾಗಿ ಕೆಪಿಸಿಸಿ ಅಧ್ಯಕ್ಷರಾಗಿ @DKShivakumar ಅವರನ್ನು ಕಾರ್ಯಾಧ್ಯಕ್ಷರಾಗಿ @eshwar_khandre, @JarkiholiSatish, @SaleemAhmadINC ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.@siddaramaiah ಅವರು ಶಾಸಕಾಂಗ ಪಕ್ಷ ಮತ್ತು ವಿರೋಧ ಪಕ್ಷದ ನಾಯಕರಾಗಿ ಮುಂದುವರೆಯಲಿದ್ದಾರೆ. pic.twitter.com/tzcq3jf4Kr
— Karnataka Congress (@INCKarnataka) March 11, 2020