ಬೆಂಗಳೂರು: ಸಿಎಂ ಕುಮಾರಸ್ವಾಮಿಯವರು ಕಣ್ಣೀರ ವಿಚಾರಕ್ಕೆ ಕಾಂಗ್ರೆಸ್ ನಾಯಕರೇ ಕಾರಣ ಎಂಬ ಹೇಳಿಕೆ ನೀಡಿದ್ದ ಇಬ್ಬರು ಕೈ ನಾಯಕರಿಗೆ ಕೆಪಿಸಿಸಿ ನೋಟಿಸ್ ಜಾರಿಗೊಳಿಸಿದೆ.
ರಾಮನಗರದಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಸಿಎಂ ಕುಮಾರಸ್ವಾಮಿಯವರು ಕಣ್ಣೀರು ಹಾಕಿದ್ದರ ಕುರಿತು ಪ್ರತಿಕ್ರಿಯಿಸಿದ್ದ ಕೈ ನಾಯಕರುಗಳಾದ ಮಾಜಿ ಸ್ಪೀಕರ್ ಕೋಳಿವಾಡ ಹಾಗೂ ಮಾಜಿ ಶಾಸಕ ಕೆ.ಎನ್. ರಾಜಣ್ಣನವರಿಗೆ ಕೆಪಿಸಿಸಿ ನೋಟಿಸ್ ಜಾರಿಗೊಳಿಸಿದೆ. ಇದನ್ನೂ ಓದಿ: ಸಿಎಂ ಎಚ್‍ಡಿಕೆ ಕಣ್ಣೀರಿಗೆ ಕಾಂಗ್ರೆಸ್ಸಿಗರೇ ಕಾರಣ: ಮಾಜಿ ಸ್ಪೀಕರ್ ಕೋಳಿವಾಡ
Advertisement
ಮಾಜಿ ಶಾಸಕರಾದ ಕೆ.ಎನ್. ರಾಜಣ್ಣ ಮೈತ್ರಿ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಟೀಕೆ ನಡೆಸಿದ್ದರು. ಅಲ್ಲದೇ ಮಾಜಿ ಸ್ಪೀಕರ್ ಕೋಳಿವಾಡ ಸಹ ಸಿಎಂ ಕುಮಾರಸ್ವಾಮಿ ಕಣ್ಣೀರಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂಬುದಾಗಿ ಹೇಳಿಕೆ ನೀಡಿದ್ದರು. ಇವರ ಈ ಹೇಳಿಕೆಯಿಂದಾಗಿ ಕಾಂಗ್ರೆಸ್ ರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ಉಂಟಾಗಿತ್ತು. ಇದನ್ನೂ ಓದಿ: ಸಂಪುಟ ರಚನೆಯಾದ ಒಂದು ವಾರದಲ್ಲೇ ಸಮ್ಮಿಶ್ರ ಸರ್ಕಾರ ಪತನ : ಕೈ ಮಾಜಿ ಶಾಸಕ ರಾಜಣ್ಣ ಭವಿಷ್ಯ
Advertisement
ಈ ಹಿನ್ನೆಲೆಯಲ್ಲಿ ಕೆಪಿಸಿಸಿಯು ಇಬ್ಬರೂ ನಾಯಕರುಗಳಿಗೆ ನೀವು ಪಕ್ಷಕ್ಕೆ ಮುಜುಗರ ತರುವಂತೆ ಹೇಳಿಕೆ ನೀಡುತ್ತಿದ್ದು, ನಿಮ್ಮ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬಾರದು ಯಾಕೆ ಎಂದು ಕಾರಣ ಕೇಳಿ ನೋಟಿಸ್ ನೀಡಿದೆ. ಅಲ್ಲದೇ ಈ ನೋಟಿಸ್ ಗೆ ಒಂದು ವಾರದೊಳಗೆ ಉತ್ತರಿಸುವಂತೆ ಸೂಚಿಸಲಾಗಿದೆ.