ರಾಯಚೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬರೀ ಊಹಾಪೋಹ, ಯಾವುದೇ ಚರ್ಚೆಗಳು ನಡೆದಿಲ್ಲ. ನಾನು ಯಾವುದೇ ಆಕಾಂಕ್ಷಿನೂ ಅಲ್ಲ, ಅಪೇಕ್ಷೆಯೂ ಇಲ್ಲ. ಊಹಾಪೋಹಗಳಿಗೆ ಯಾವುದೇ ಹುರುಳಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ (Sharana Prakash Patil) ಹೇಳಿದ್ದಾರೆ.
ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್‌ನ ರಾಷ್ಟ್ರಮಟ್ಟದ ಸಮಾವೇಶ ಹಿನ್ನೆಲೆ ರಾಯಚೂರಿನಲ್ಲಿ ಪೂರ್ವಭಾವಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥವಾಗಿ ಎದುರಿಸುತ್ತಿದ್ದಾರೆ. ಪಕ್ಷದ ಮಟ್ಟದಲ್ಲಿ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ, ಪ್ರಸ್ತಾಪವೂ ಇಲ್ಲ ಎಂದರು.ಇದನ್ನೂ ಓದಿ: ಸಿದ್ದರಾಮಯ್ಯ ರಾಜ್ಯದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ ಸಿಎಂ – ಜನಾರ್ದನ ರೆಡ್ಡಿ ಲೇವಡಿ
Advertisement
Advertisement
ನಮ್ಮ ಪಕ್ಷದಲ್ಲಿ ಯಾವುದೇ ಬಣ ರಾಜಕೀಯ ಇಲ್ಲ, ಯಾರಿಗೂ ಓಲೈಸುವಂಥದ್ದು ಇಲ್ಲ. ಸಿಎಲ್‌ಪಿ ಸಭೆಯಲ್ಲಿ ಯಾವುದೇ ಭಿನ್ನಮತ ಆಗಿಲ್ಲ. ಅವರವರ ಅಭಿಪ್ರಾಯವನ್ನ ನಾಯಕರು ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ. ರಾಜ್ಯದಲ್ಲಿ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಅಧಿಕಾರ ಕೊಟ್ಟಿದ್ದಾರೆ. ನಿಸ್ವಾರ್ಥ ಭಾವನೆಯಿಂದ ಜನಸೇವೆ ಮಾಡೋದಕ್ಕೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
Advertisement
ರಾಜ್ಯದಲ್ಲಿ ದರೋಡೆ ಪ್ರಕರಣಗಳು ಹೆಚ್ಚುತ್ತಿರುವ ವಿಚಾರವಾಗಿ ಮಾತನಾಡಿ, ಈ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ, ಗೃಹ ಸಚಿವರು ಇದನ್ನ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಆರೋಪಿಗಳನ್ನ ಪತ್ತೆ ಹಚ್ಚುವ ಕೆಲಸ ಮಾಡಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮವಾಗುತ್ತದೆ. ಬಿಜೆಪಿಯವರು ಏನೇ ಆರೋಪ ಮಾಡಬಹುದು, ಅವರ ಆಡಳಿತ ಹಿಂದೆ ಹೇಗಿತ್ತು ಗೊತ್ತಿದೆ. ಜಿ.ಪರಮೇಶ್ವರ್ ಸಮರ್ಥ ಗೃಹ ಸಚಿವರಿದ್ದಾರೆ. ಹಿರಿಯ ನಾಯಕರ ಬಗ್ಗೆ ಮಾತನಾಡೋದು ಯಾರಿಗೂ ಶೋಭೆ ತರುವುದಿಲ್ಲ. ಈ ಸವಾಲನ್ನು ಸಮರ್ಥವಾಗಿ ನಿಭಾಯಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಬೀದರ್‌ನಲ್ಲಿ ಎಟಿಎಂ ಹಣ ದರೋಡೆ ಕೇಸ್ – ಖದೀಮರ ಸುಳಿವು ಪತ್ತೆ