Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಪಕ್ಷ ಕೊಡುವ ಎಲ್ಲಾ ಗ್ಯಾರಂಟಿ ಭರವಸೆಗಳನ್ನ ಈಡೇರಿಸುತ್ತೆ – ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಪಕ್ಷ ಕೊಡುವ ಎಲ್ಲಾ ಗ್ಯಾರಂಟಿ ಭರವಸೆಗಳನ್ನ ಈಡೇರಿಸುತ್ತೆ – ಡಿಕೆಶಿ

Bengaluru City

ಕಾಂಗ್ರೆಸ್ ಪಕ್ಷ ಕೊಡುವ ಎಲ್ಲಾ ಗ್ಯಾರಂಟಿ ಭರವಸೆಗಳನ್ನ ಈಡೇರಿಸುತ್ತೆ – ಡಿಕೆಶಿ

Public TV
Last updated: January 20, 2023 4:37 pm
Public TV
Share
2 Min Read
DKSHI 1
SHARE

ಬೆಂಗಳೂರು: ಕಾಂಗ್ರೆಸ್ (Congress) ಕೊಟ್ಟಿರುವ ಗ್ಯಾರಂಟಿ ಭರವಸೆಗಳನ್ನ ಈಡೇಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಮತ್ತೊಮ್ಮೆ ಪುನರುಚ್ಛಾರ ಮಾಡಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಏನು ಮಾಡಲಿದೆ ಎಂದು ಜನರಿಗೆ ತಿಳಿಯಬೇಕು. ಹೀಗಾಗಿ ಕಾರ್ಯಕರ್ತರು ಪ್ರತಿ ಮನೆಗೆ ಹೋಗಿ ಈ ವಿಚಾರ ಮುಟ್ಟಿಸಬೇಕು. ಅಲ್ಲದೆ ಈ ಯೋಜನೆ ಬಗ್ಗೆ ಯಾರಿಗೆಲ್ಲ ಆಸಕ್ತಿ ಇದೆ ಎಂದು ತಿಳಿಯಬೇಕು ಎಂದರು. ಇದನ್ನೂ ಓದಿ: ಕಾಂಗ್ರೆಸ್-ಜೆಡಿಎಸ್ ಸಭೆಗಳಲ್ಲಿ ಚಪ್ಪಲ್ಲಿ ಹಿಡಿದು ಕಿತ್ತಾಟ – ಬಿಜೆಪಿ ಸಭೆಯಲ್ಲಿ ಮಾತ್ರ ಶಿಸ್ತು: ನಳಿನ್ ಕುಮಾರ್ ಕಟೀಲ್

Priyanka Gandhi DK Shivakumar Siddaramaiah

ಬಿಜೆಪಿ (BJP) ನಾಯಕರು ಈ ಯೋಜನೆ ಜಾರಿಗೆ ಹಣ ಎಲ್ಲಿಂದ ತರುತ್ತಾರೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಅದನ್ನು ಹೇಗೆ ತರಬೇಕು ಎಂದು ನಮಗೆ ಗೊತ್ತಿದೆ. ಸಿದ್ದರಾಮಯ್ಯ ಅವರು 13 ಬಜೆಟ್ ಮಂಡನೆ ಮಾಡಿದ್ದಾರೆ. ನಾನು ಕೂಡ 35-40 ವರ್ಷಗಳಿಂದ ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ. ಈ ಯೋಜನೆಗಳಿಗೆ ಹೇಗೆ ಸಂಪನ್ಮೂಲ ಕ್ರೋಢೀಕರಣ ಮಾಡಬೇಕೆಂದು ತಿಳಿದಿದೆ ಹೇಳಿದರು.

ನಾವು ಘೋಷಣೆ ಪ್ರಕಟಿಸಿದ ಮೇಲೆ ಈಗ ಮುಖ್ಯಮಂತ್ರಿಗಳು ಹಾಗೂ ಸಚಿವ ಅಶೋಕ್ ಅವರು ಬಜೆಟ್‌ನಲ್ಲಿ ಈ ಯೋಜನೆ ತರುತ್ತೇವೆ ಎಂದು ಹೇಳಿದ್ದಾರೆ. ಕಳೆದ ಮೂರೂವರೆ ವರ್ಷಗಳಿಂದ ಸರ್ಕಾರ ಯಾಕೆ ಈ ಕಾರ್ಯಕ್ರಮ ನೀಡಲಿಲ್ಲ. ಕೋವಿಡ್ ಸಮಯದಲ್ಲಿ ಸಾಂಪ್ರದಾಯಿಕ ವೃತ್ತಿ ಮಾಡಿಕೊಂಡು ಬಂದವರಿಗೆ 10 ಸಾವಿರ ಪ್ರೋತ್ಸಾಹ ಧನ ನೀಡುವಂತೆ ನಾವು ಆಗ್ರಹಿಸಿದೆವು. ಅದನ್ನು ಅವರಿಂದ ನೀಡಲು ಆಗಲಿಲ್ಲ. 5 ಸಾವಿರ ನೀಡುವುದಾಗಿ ಘೋಷಣೆ ಮಾಡಿ ಅದನ್ನು ಸರಿಯಾಗಿ ನೀಡಲಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ತನಿಖೆ ಮಾಡಿದ್ರೆ ಕಾಂಗ್ರೆಸ್ಸಿನವರಿಗೋಸ್ಕರ ಹೊಸ ಜೈಲು ತೆರೆಯಬೇಕಾಗುತ್ತೆ: ಆರಗ ತಿರುಗೇಟು

Basavaraj Bommai 1 6

ಈ ಸರ್ಕಾರದವರು 1,800 ಕೋಟಿ ಪ್ಯಾಕೇಜ್ ಘೋಷಣೆ ಮಾಡಿದರು. ಆದರೆ ಅದು ಜನರಿಗೆ ತಲುಪಲಿಲ್ಲ. 25 ಲಕ್ಷ ಚಾಲಕರ ಪೈಕಿ ಕೇವಲ 6 ಲಕ್ಷ ಮಂದಿಗೆ ಮಾತ್ರ 5 ಸಾವಿರ ನೀಡಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಅಡುಗೆ ಅನಿಲಕ್ಕೆ ಸಬ್ಸಿಡಿ ನೀಡಿ 410 ರೂ.ಗೆ ಸಿಲಿಂಡರ್ ನೀಡುತ್ತಿದ್ದೆವು. ಈಗ ಅದು 1,100 ರೂಪಾಯಿ ಆಗಿದೆ. ಹೀಗಾಗಿ ಬೆಲೆ ಏರಿಕೆ ಹೊರೆ ತಗ್ಗಿಸಲು ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡಲು ಘೋಷಣೆ ಮಾಡಿದ್ದೇವೆ. ಇದರಿಂದ ಪ್ರತಿ ಮನೆಗೆ 1,500ರಂತೆ ವರ್ಷಕ್ಕೆ 18,000 ಉಳಿತಾಯವಾಗುತ್ತದೆ ಎಂದರು.

ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರದಂತೆ ವರ್ಷಕ್ಕೆ 24 ಸಾವಿರ ನೀಡುವ ಘೋಷಣೆ ಮಾಡಲಾಗಿದೆ. ಇವೆರೆಡರಿಂದಲೂ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 42 ಸಾವಿರ ಉಳಿತಾಯ ಆಗುತ್ತದೆ. ಈಗ ಮುಖ್ಯಮಂತ್ರಿಗಳು ನಾವು ಈ ಯೋಜನೆ ಬಗ್ಗೆ ಯೋಚನೆ ಮಾಡಿದ್ದೆವು ಎಂದು ಹೇಳುತ್ತಿದ್ದಾರೆ. ಅವರು ಎಲ್ಲರ ಖಾತೆಗೆ 15 ಲಕ್ಷ ಹಾಕುವುದಾಗಿ ಜನಧನ್ ಖಾತೆ ತೆರೆಸಿದರು. ಆದರೆ ಯಾವ ಖಾತೆಗೂ ಬರಲಿಲ್ಲ. ಆದರೆ ನಾವು ಘೋಷಣೆ ಮಾಡಿರುವ ಯೋಜನೆಗಳು ಗ್ಯಾರೆಂಟಿ ಯೋಜನೆ. ಸಿದ್ದರಾಮಯ್ಯ (Siddaramaiah) ಅವರು ಈಗ ನೀಡಲಾಗುತ್ತಿರುವ 5 ಕೆಜಿ ಅಕ್ಕಿಯನ್ನು 10 ಕೆಜಿಗೆ ಏರಿಕೆ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಇನ್ನು ಕೆಲವು ಯೋಜನೆಗಳ ಘೋಷಣೆ ಬಾಕಿ ಇವೆ ಅಂತಾ ಇದೇ ವೇಳೆ ತಿಳಿಸಿದರು. ಇದನ್ನೂ ಓದಿ: ಫೆ.17ಕ್ಕೆ ರಾಜ್ಯ ಬಜೆಟ್‌ ಮಂಡನೆ – ಜೆ.ಸಿ.ಮಾಧುಸ್ವಾಮಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressd k shivakumarಕಾಂಗ್ರೆಸ್ಡಿ.ಕೆ.ಶಿವಕುಮಾರ್ಬಿಜೆಪಿ
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Kerala tourism
Latest

ಕೇರಳ ಇನ್ನು ಮುಂದೆ ಕೇರಳಂ – ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ

Public TV
By Public TV
4 minutes ago
Centre to launch HPV vaccination drive for girls aged 14 to prevent cancer
Latest

ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Public TV
By Public TV
31 minutes ago
CT Ravi
Bengaluru City

ಕುರ್ಚಿಗೆ ಕಂಟಕ ಬಂದಾಗ ಸಿದ್ದರಾಮಯ್ಯರಿಂದ ಸಾಮಾಜಿಕ ನ್ಯಾಯ, ಜಾತಿ ಬಗ್ಗೆ ಪ್ರಸ್ತಾಪ: ಸಿ.ಟಿ ರವಿ

Public TV
By Public TV
57 minutes ago
CT Ravi
Bengaluru City

ಶಿವಮೊಗ್ಗದಲ್ಲಿ ಸಂಕೇತ್‌ ಹತ್ಯೆ| ಕೋಮು ಗಲಭೆ ಹುಟ್ಟು ಹಾಕಲು ಕೃತ್ಯ ಎಸಗಿದಂತಿದೆ – ಸಿಟಿ ರವಿ

Public TV
By Public TV
1 hour ago
Shivamogga Sanketh Murder Case
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
1 hour ago
Ashok Pattan
Bengaluru City

ಮೊದಲ ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಅಶೋಕ್ ಪಟ್ಟಣ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?