ಬೆಂಗಳೂರು: ಬಿಜೆಪಿ ನೀಡುತ್ತಿರುವ ಕಿರುಕುಳ ತಪ್ಪಿಸಿಕೊಳ್ಳುವದಕ್ಕಾಗಿ ಎಲ್ಲ ಶಾಸಕರನ್ನು ಕರೆದುಕೊಂಡು ರೆಸಾರ್ಟ್ ಗೆ ಹೋಗುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಎಲ್ಲ ಶಾಸಕರೊಂದಿಗೆ ಚರ್ಚೆ ಮಾಡಿ, ಬಿಜೆಪಿ ನೀಡುತ್ತಿರುವ ಆಮಿಷಗಳನ್ನು ಯಾವ ರೀತಿಯಲ್ಲಿ ಎದುರಿಸಬೇಕು ಎಂಬುದರ ಕುರಿತಾಗಿ ರೆಸಾರ್ಟ್ ನಲ್ಲಿ ಮಾತನಾಡುತ್ತೇವೆ. ಬಿಜೆಪಿ ನಡೆಸುತ್ತಿರುವ ಆಪರೇಷನ್ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕಿದೆ. ನಾವೇನು ಹರಿಯಾಣ, ದೆಹಲಿಯಲ್ಲಿ ಕುಳಿತುಕೊಂಡಿಲ್ಲ. ಎಲ್ಲರೆದರು ವಿಧಾನಸೌಧದಲ್ಲಿಯೇ ಶಾಸಕಾಂಗ ಸಭೆ ಮಾಡಿದ್ದೇವೆ ಎಂದು ದಿನೇಶ್ ಗುಂಡೂರಾವ್ ಬಿಜೆಪಿಗೆ ತಿರುಗೇಟು ನೀಡಿದರು.
ನಮ್ಮ ಪಕ್ಷದ ಸಾಮರ್ಥ್ಯವನ್ನು ರಾಜ್ಯದ ಜನತೆಗೆ ತೋರಿಸಿದ್ದೇವೆ. ಐಟಿ, ಇಡಿ, 50 ಕೋಟಿ, 100 ಕೋಟಿ ಈ ರೀತಿಯಲ್ಲಿ ಬಿಜೆಪಿಯವರು ಟಾರ್ಚರ್ ಕೊಡುತ್ತಿದ್ದಾರೆ. ಬಹಿರಂಗವಾಗಿಯೇ ಬಿಜೆಪಿ ನಾಯಕರು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ. ಜನರನ್ನು ಭಯ ಬೀಳಿಸುವಂತಹ ಪಾರ್ಟಿ ಬಿಜೆಪಿ. ಹಾಗಾಗಿ ನಮ್ಮ ಶಾಸಕರಿಗೆ ಧೈರ್ಯ ತುಂಬುವ ಕೆಲಸ ನಡೆಯಬೇಕಿದೆ. ಈ ಎಲ್ಲ ವಿಷಯಗಳ ಕುರಿತಾಗಿ ಒಗ್ಗಟ್ಟಿನಿಂದ ಒಂದು ಕಡೆ ಸೇರಿ ಮಾತನಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv