ಬೆಂಗಳೂರು: ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ. ಹೀಗಾಗಿ ಜನರ ಧ್ವನಿಯಾಗಿ ಈ ಹೋರಾಟ ನಡೆಸುತ್ತಿದ್ದೇವೆ ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
Advertisement
ಟಾಂಗಾ ಜಾಥಾ ನಡೆಸುತ್ತಿದ್ದ ವೇಲೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಡಿಕೆಶಿ, ಜನರ ಗಮನ ಸೆಳೆಯಲು ಈ ಹೋರಾಟ ನಡೆಸುತ್ತಿದ್ದೇವೆ. ಪ್ರತಿ ಗ್ರಾಮ, ವಾರ್ಡ್ ಗಳಲ್ಲಿ ಹೋರಾಟ ರೂಪಿಸ್ತೀವಿ. ಮಾನಮರ್ಯಾದೆ ಇಲ್ಲದ ಸರ್ಕಾರ ಇದಾಗಿದ್ದು, ಜನರ ಧ್ವನಿಯಾಗಿ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್‍ನಿಂದ ಸಂಪೂರ್ಣ ಬೆಂಬಲ
Advertisement
Advertisement
ಎಲ್ಲಾ ಬೆಲೆಗಳು ಗಗನಕ್ಕೆ ಏರಿದೆ. ಸಾಮಾನ್ಯ ಜನ ಮನೆ ಕಟ್ಟಲು ಆಗುತ್ತಿಲ್ಲ. ಜನರ ಪಿಕ್ ಪಾಕೆಟ್ ಮಾಡುತ್ತಿದೆ. ಸರ್ಕಾರಕ್ಕೆ ಕಣ್ಣು ಇಲ್ಲ ಕಿವಿನೂ ಇಲ್ಲ. ಜನರ ಧ್ವನಿಯಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಅಕ್ಟೋಬರ್ ನಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತೇವೆ. ಜನರೇ ಈ ಸರ್ಕಾರ ಕಿತ್ತೊಗೆಯಬೇಕು. ರೈತರಿಗೆ ಯಾವುದೇ ಅನುಕೂಲ ಮಾಡಿಕೊಟ್ಟಿಲ್ಲ. ನಮ್ಮ ಹೋರಾಟ ಮುಂದುವರೆಯುತ್ತೆ ಎಂದು ಡಿಕೆಶಿ ಹೇಳಿದರು.
Advertisement
ಎತ್ತಿನ ಬಂಡಿ ಆಯ್ತು, ಸೈಕಲ್ ಸವಾರಿ ಆಯ್ತು ಈಗ ಟಾಂಗಾ ಜಾಥಾ. ಇದು ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಾಯಕರು ಇಂದು ಹಮ್ಮಿಕೊಂಡಿರುವ ವಿಭಿನ್ನ ಪ್ರತಿಭಟನೆ. ಕೇಂದ್ರ ಸರ್ಕಾರದ ನಿರಂತರ ಇಂಧನ ಬೆಲೆ ಹಾಗೂ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಇಂದು ಟಾಂಗಾ ಜಾಥಾ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮೂಲೆಗುಂಪಾಗಿರೋ ಕಾಂಗ್ರೆಸ್ ಟಾಂಗಾ, ಸೈಕಲ್ ಓಡಿಸೋದಕ್ಕೆ ಮಾತ್ರ ಸೀಮಿತ: ಆರ್. ಅಶೋಕ್
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧಕ್ಕೆ ಟಾಂಗಾ ಗಾಡಿಯಲ್ಲಿ ಹೋಗುವ ಮೂಲಕ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಮಂತ್ರಿಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರುಗಳು ಜಾಥಾದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಹೇರ್ ಕಟ್ ಎಡವಟ್ಟು-ಮಾಡೆಲ್‍ಗೆ 2ಕೋಟಿ ಪರಿಹಾರ ನೀಡುವಂತೆ ಆದೇಶ