ಬೆಂಗಳೂರು: ಮಾಜಿ ಸಚಿವ ಸೊಗಡು ಶಿವಣ್ಣ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಮೊದಲು ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು. ರಾಜಕೀಯವಾಗಿ ಜಾಗ ಇಲ್ಲದೆ ಹುಡುಕುತ್ತಿದ್ದಾರೆ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.
ಸದಾಶಿವನಗರದಲ್ಲಿ ಡಿ.ಕೆ.ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಮೆಂಟಲ್ ಆಸ್ಪತ್ರೆಯಲ್ಲಿ ಇರಬೇಕಾದವರು ಮಾತಾಡ್ತಿದ್ದಾರೆ. ಅವರ ಬಗ್ಗೆ ನಾನು ಮಾತನಾಡಲ್ಲ ಎಂದರು. ಇದನ್ನೂ ಓದಿ: ನನ್ನಿಂದ ತಪ್ಪಾಗಿದೆ, ಡಿಕೆಶಿ ಮುಖ ನೋಡಲು ಆಗ್ತಿಲ್ಲ: ಸಲೀಂ ಕಣ್ಣೀರು
Advertisement
Advertisement
ಯಾವುದಾದರೂ ಆಸ್ತಿ ಇದ್ದರೆ ಅವನೇ ಮಾಡ್ಕೊಳ್ಳಿ, ಅವನಿಗೆ ಎಲ್ಲಾ ಗಿಫ್ಟ್ ಕೊಟ್ಟು ಬಿಡ್ತೀನಿ. ರಾಜಕೀಯ ವಾಗಿ ಅವನಿಗೆ ಜಾಗ ಇಲ್ಲ ಹೀಗಾಗಿ ಮಾತಾಡ್ತಿದ್ದಾನೆ. ಮೊದಲು ರಾಜಕೀಯ ಜಾಗ ಹುಡುಕಿಕೊಳ್ಳಲಿ ಎಂದು ಡಿಕೆಶಿ ತಿರುಗೇಟು ನೀಡಿದರು. ಇದನ್ನೂ ಓದಿ: ಕಾಂಗ್ರೆಸ್ಸಿನಿಂದ ಸಲೀಂ 6 ವರ್ಷ ಉಚ್ಚಾಟನೆ- ಉಗ್ರಪ್ಪಗೆ ಶೋಕಾಸ್ ನೋಟಿಸ್ ಜಾರಿ
Advertisement
Advertisement
ಸೊಗಡು ಶಿವಣ್ಣ ಏನು ಹೇಳಿದ್ದರು..?
ನಿನ್ನೆ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸೊಗಡು ಶಿವಣ್ಣ, ಎಂ.ಎ.ಸಲೀಂ ಮತ್ತು ಉಗ್ರಪ್ಪ ಮಾತನಾಡಿರುವುದು ಸತ್ಯ. ಡಿಕೆಶಿ ರೀಟೇಲ್ ವ್ಯಾಪಾರಿಯಲ್ಲ, ಹೋಲ್ ಸೇಲ್ ವ್ಯಾಪಾರಿ, ಬೇನಾಮಿ ಹೆಸರಿನಲ್ಲಿ ಬೇಕಾದಷ್ಟು ಆಸ್ತಿ ಮಾಡಿಕೊಂಡಿದ್ದಾರೆ. ಡಿಕೆಶಿ ತುಮಕೂರಿನಲ್ಲಿ ಕೋಟ್ಯಂತರ ರೂಪಾಯಿ ಬೇನಾಮಿ ಆಸ್ತಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಪರ್ಸಂಟೇಜ್ ಆರೋಪ – ನನಗೂ, ಪಕ್ಷಕ್ಕೂ ಸಂಬಂಧವಿಲ್ಲದ ವಿಚಾರ ಅಂದ್ರು ಡಿಕೆಶಿ
ಕೃಷ್ಣಮೂರ್ತಿ ಅವರ ಹೆಸರಿನಲ್ಲಿ ಬೇನಾಮಿ ಆಸ್ತಿಗಳಿವೆ. ಪಾವಗಡದಲ್ಲಿ ಸೋಲಾರ್ ಪಾರ್ಕ್, 100 ಕೋಟಿ ರೂಪಾಯಿ ವೆಚ್ಚದಲ್ಲಿ ಹೆಂಚಿನ ಫ್ಯಾಕ್ಟರಿ, ಗಣಿ ತಯಾರಿಕೆ ಕಾರ್ಖಾನೆಗಳಿವೆ. ಇವೆಲ್ಲಾ ಬೇನಾಮಿ ಹೆಸರುಗಳಲ್ಲಿದ್ದು ಡಿಕೆಶಿ ಅಕ್ರಮವಾಗಿ ಸಂಪಾದನೆ ಮಾಡಿಕೊಂಡಿದ್ದಾರೆ. ಈ ಹಿಂದೆ ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಡಿಕೆಶಿ ಸಂಪಾದಿಸಿಕೊಂಡ ಅಕ್ರಮ ಆಸ್ತಿಗಳಿವು ಎಂದು ಆರೋಪಿಸಿದ್ದರು. ಇದನ್ನೂ ಓದಿ: ಡಿಕೆಶಿಯನ್ನು 4 ದಶಕಗಳಿಂದ ಬಲ್ಲೆ, ಒಬ್ಬ ಒಳ್ಳೆಯ ಆಡಳಿತಗಾರ: ಉಗ್ರಪ್ಪ