ನವದೆಹಲಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ಗೆ ನಡೆಯಲಿರುವ ಚುನಾವಣೆಗೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ. ಸಂಜೆ ಬಳಿಕ ಒಂದೆರಡು ಕ್ಷೇತ್ರಗಳನ್ನು ಹೊರತುಪಡಿಸಿ ಬಹುತೇಕ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಅಭ್ಯರ್ಥಿಗಳನ್ನು ಘೋಷಿಸಬಹುದು ಎಂದು ಮೂಲಗಳು ಹೇಳಿವೆ.
Advertisement
ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಿನ್ನೆ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ ಭೇಟಿ ಮಾಡಿದ್ದ ಡಿ.ಕೆ ಶಿವಕುಮಾರ್ ಇಂದು ಸೋನಿಯಾಗಾಂಧಿ ಭೇಟಿಯಾಗಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ.
Advertisement
ಸೋನಿಯಾಗಾಂಧಿ ಭೇಟಿ ವೇಳೆ ಕೋಲಾರ, ಮೈಸೂರು ಮತ್ತು ಬೆಂಗಳೂರಿನಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಇರುವ ಗೊಂದಲಗಳ ಬಗ್ಗೆ ಚರ್ಚಿಸಿದ್ದು ಬಾಕಿ ಉಳಿದ ಕ್ಷೇತ್ರಗಳಿಂದ ಆಯ್ಕೆಯಾಗಿರುವ ಒಂದೊಂದು ಹೆಸರುಗಳನ್ನು ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸಂಸತ್ ಚುನಾವಣೆ ವೇಳೆ ಜೆಡಿಎಸ್ ಬೆಂಬಲಿಸಿ ತಪ್ಪು ಮಾಡಿದ್ದೇವೆ: MLC ಗೋಪಾಲಸ್ವಾಮಿ
Advertisement
ದಿಲ್ಲಿಯಲ್ಲಿಂದು ಎಐಸಿಸಿ ಅಧ್ಯಕ್ಷೆ ಶ್ರೀಮತಿ ಸೋನಿಯಾಗಾಂಧಿ ಅವರನ್ನು ಭೇಟಿಯಾಗುವ ಅವಕಾಶ ದೊರೆಯಿತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಅವರೊಂದಿಗೆ ಚರ್ಚೆ ನಡೆಸಿದೆ.
— DK Shivakumar (@DKShivakumar) November 20, 2021
Advertisement
ಭೇಟಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಸೋನಿಯಾ ಗಾಂಧಿ ಭೇಟಿ ಮಾಡಿ ಹಲವು ವಿಷಯ ಚರ್ಚಿಸಿದ್ದೇನೆ, ವಿಧಾನ ಪರಿಷತ್ ಅಭ್ಯರ್ಥಿಗಳ ಬಗ್ಗೆ ಚರ್ಚೆ ಆಗಿದೆ. ಅವರು ರಾಜ್ಯ ಉಸ್ತುವಾರಿ ಜೊತೆ ಚರ್ಚಿಸಿ ಅಭ್ಯರ್ಥಿಗಳನ್ನು ಪ್ರಕಟಿಸುತ್ತಾರೆ, 2-3 ಕ್ಷೇತ್ರಗಳನ್ನು ಬಿಟ್ಟು ಉಳಿದೆಲ್ಲಾ ಒಂದೇ ಬಾರಿಗೆ ಪ್ರಕಟ ಆಗುತ್ತೆ. ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೊಂದಣಿ ಬಗ್ಗೆ ಮತ್ತು ಪಕ್ಷ ಸಂಘಟನೆ ಬಗ್ಗೆ ಸೋನಿಯಾ ಗಾಂಧಿ ಜೊತೆ ಚರ್ಚಿಸಿದ್ದೇನೆ ಎಂದರು.
ಕೆಪಿಸಿಸಿ ಅಧ್ಯಕ್ಷರಾದ @DKShivakumar ಅವರು ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಕರ್ನಾಟಕ ರಾಜ್ಯದ ಪ್ರಸಕ್ತ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. https://t.co/8bbgUj830P
— Karnataka Congress (@INCKarnataka) November 20, 2021
ಮೂಲಗಳ ಪ್ರಕಾರ ಬೆಂಗಳೂರು ಗ್ರಾಮಾಂತರದಿಂದ ಎಸ್.ರವಿ, ಶಿವಮೊಗ್ಗದಿಂದ ಪ್ರಸನ್ನ ಕುಮಾರ್, ಚಿಕ್ಕಮಗಳೂರುನಿಂದ ಗಾಯಿತ್ರಿ ಶಾಂತೇಗೌಡ, ತುಮಕೂರುನಿಂದ ರಾಜೇಂದ್ರ, ಚಿತ್ರದುರ್ಗ ದಾವಣಗೆರೆಯಿಂದ ಸೋಮಶೇಖರ್, ಮಂಡ್ಯದಿಂದ ದಿನೇಶ್ ಗೂಳಿ ಗೌಡ, ಕೊಡಗುನಿಂದ ಮಂಥರ್ ಗೌಡ, ಹಾಸನದಿಂದ ಶಂಕರ್, ಕೊಪ್ಪಳ – ರಾಯಚೂರಿನಿಂದ ಶರಣೇಗೌಡ ಬಯ್ಯಾಪುರ, ಧಾರವಾಡದಿಂದ (ದ್ವಿ ಸದಸ್ಯ ಸ್ಥಾನ) ಸಲೀಂ ಅಹಮ್ಮದ್, ಬೆಳಗಾವಿಯಿಂದ (ದ್ವಿ ಸದಸ್ಯ ಸ್ಥಾನ)ಚನ್ನರಾಜು, ಗದಗನಿಂದ ಆರ್.ಎಸ್ ಪಾಟೀಲ್, ಉತ್ತರ ಕನ್ನಡದಿಂದ ಭೀಮಣ್ಣ ನಾಯಕ ಹೆಸರು ಬಹುತೇಕ ಖಚಿತವಾಗಿದೆ.