ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ತಮ್ಮನಿಗೆ ನಾನು ಬನ್ನಿ ಒಂದು ಕ್ಷೇತ್ರಕ್ಕೆ ನಿಲ್ಲಿ ಅಂತ ಹಿಂದೆಯೇ ಹೇಳಿದ್ದೆ. ಆದರೆ ಅವರು ತಮ್ಮ ಸೇವೆಯನ್ನ ಹಾಳು ಮಾಡಿಕೊಳ್ಳಲು ಇಚ್ಛಿಸೋದಿಲ್ಲ. ಹೀಗಾಗಿ ಅವರು ತಿರಸ್ಕರಿಸಿದ್ರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಕಲೆ, ಸಂಸ್ಕೃತಿ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಅತ್ಯಮೂಲ್ಯ ಕೊಡುಗೆ ನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಶ್ರೀ ವೀರೇಂದ್ರ ಹೆಗ್ಗಡೆ ಅವರನ್ನು ಇಂದು ಬೆಂಗಳೂರಿನಲ್ಲಿ ಭೇಟಿಯಾಗಿ, ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಖಾವಂದರಿಗೆ ಶುಭಕೋರಿದೆ. pic.twitter.com/skQXJv0Jjs
— DK Shivakumar (@DKShivakumar) July 8, 2022
Advertisement
ಇಂದು ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ನನಗೂ ವೀರೇಂದ್ರ ಹೆಗ್ಗಡೆಯವರಿಗೂ, ಮಂಜುನಾಥನಿಗೂ ಭಕ್ತರಿಗೂ ಇರೋ ಸಂಬಂಧ ಹೇಗೋ ಭಕ್ತನಿಗೂ, ಭಗವಂತನಿಗೂ ಇರುವ ಪ್ರೀತಿ, ವಿಶ್ವಾಸ ಗೌರವ ಅವರ ಮೇಲಿದೆ. ಆದರೆ ವೀರೇಂದ್ರ ಹೆಗ್ಗಡೆ ಅವರು ದೊಡ್ಡ ಕ್ಷೇತ್ರಕ್ಕೆ ಧರ್ಮಾಧಿಕಾರಿ ಆಗಿದ್ದಾರೆ. ಮಾತು ತಪ್ಪದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ ಅಂತ ಮಾತಿದೆ. ಅವರಿಗೆ ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮಿನೇಟ್ ಮಾಡಿದೆ. ಅವರೂ ಕೂಡ ಒಪ್ಪಿದ್ದಾರೆ. ಅವರು ಮಾಡಿದ ಗ್ರಾಮೀಣ ಅಭಿವೃದ್ಧಿ ಕೆಲಸವನ್ನ ಹಿಂದೆ ಯುಪಿಎ ಇವರು ಮಾಡಿದ ಯೋಜನೆ ಜಾರಿಗೆ ತಂದಿದೆ ಎಂದರು.
Advertisement
ಸಮುದಾಯಕ್ಕೆ ಮಹೋನ್ನತ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಶ್ರೀ ವೀರೇಂದ್ರ ಹೆಗ್ಗಡೆಯವರು ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಅವಕಾಶ ಹಾಗು ಅವರು ಆರೋಗ್ಯ,ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೈಗೊಂಡಿರುವ ಮಹತ್ತರ ಕಾರ್ಯಗಳಿಗೆ ಸಾಕ್ಷಿಯಾಗುವ ಅವಕಾಶ ನನಗೆ ಒದಗಿತ್ತು. pic.twitter.com/KwoNdZyW6Z
— Narendra Modi (@narendramodi) July 6, 2022
Advertisement
ಮಿಲ್ಕ್ ಸೊಸೈಟಿ ಅವರ ಮೂಲಕ ಅನುದಾನ ನೀಡಿದೆ. ಗ್ರಾಮೀಣ ಪ್ರದೇಶದ ದೇವಸ್ಥಾನಗಳಿಗೆ ಪ್ರತೀ ವರ್ಷ ಲಕ್ಷಾಂತರ ಹಣ ನೀಡ್ತಿದ್ರು. ಧರ್ಮಸ್ಥಳದಲ್ಲಿ ಪ್ರಾಮಾಣಿಕತೆ ಇಂದ ಸಮಾಜ ಸೇವೆ ಮಾಡುತ್ತಾ ಬಂದಿದ್ರು. ನಮ್ಮ ರಾಜ್ಯದಿಂದ ಅವರಿಗೆ ಅಭಿನಂದಿಸ್ತೇನೆ. ನನಗೆ ಬಹಳ ಸಂತೋಷ ತಂದಿದೆ ಎಂದು ತಿಳಿಸಿದರು.