ಬೆಂಗಳೂರು: ಸಮ್ಮಿಶ್ರ ಸರ್ಕಾರ ಇದ್ದಾಗ ಕುಮಾರಸ್ವಾಮಿ ಜೊತೆ ಓಡಾಡಿ ಮಾಜಿ ಸಚಿವ ಡಿಕೆ ಶಿವಕುಮಾರ್ ಸಿದ್ದರಾಮಯ್ಯರ ಕೋಪಕ್ಕೆ ಕಾರಣರಾಗಿದ್ದರು. ಇವತ್ತು ಅದೇ ಸಿದ್ದರಾಮಯ್ಯ ಮನೆ ಬಾಗಿಲನ್ನು ಡಿಕೆ ಶಿವಕುಮಾರ್ ತಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು ಇಟ್ಟಿರೋ ಡಿಕೆ ಶಿವಕುಮಾರ್ ಸಿದ್ದರಾಮಯ್ಯರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳೋಕೆ ಮುಂದಾಗಿದ್ದಾರೆ. ಇಂದು ದಿಢೀರ್ ಅಂತ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಹೋಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಸಿದ್ದರಾಮಯ್ಯ ಬಣ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನ ಲಿಂಗಾಯತರಿಗೆ ಕೊಡಬೇಕು ಅಂತ ಪಟ್ಟು ಹಿಡಿದಿದೆ. ಅದ್ರಲ್ಲೂ ಸಿದ್ದರಾಮಯ್ಯ ತಮ್ಮ ಶಿಷ್ಯ ಎಂಬಿ ಪಾಟೀಲ್ ಪರ ಬ್ಯಾಟಿಂಗ್ ಮಾಡ್ತಿದ್ದಾರೆ. ಇತ್ತ ಮೂಲ ಕಾಂಗ್ರೆಸ್ ನಾಯಕರು ಮುನಿಯಪ್ಪ, ಹರಿಪ್ರಸಾದ್ ಸೇರಿದಂತೆ ಮೂಲ ಕಾಂಗ್ರೆಸ್ ನಾಯಕರ ಪರ ಬ್ಯಾಟಿಂಗ್ ಮಾಡ್ತಿದ್ದಾರೆ. ಇದೆಲ್ಲದರ ಮಧ್ಯೆ ಏಕಾಂಗಿಯಾಗಿ ಡಿಕೆ ಶಿವಕುಮಾರ್ ಅಧ್ಯಕ್ಷ ಸ್ಥಾನಕ್ಕೆ ಓಡಾಡುತ್ತಿದ್ದಾರೆ. ಸಿದ್ದರಾಮಯ್ಯ ತಮ್ಮ ಶಿಷ್ಯ ಎಂಬಿ ಪಾಟೀಲ್ ಪರ ಬ್ಯಾಟಿಂಗ್ ಗೆ ಇಳಿದ ಕೂಡಲೇ ಡಿಕೆಶಿಗೆ ಢವ ಢವ ಪ್ರಾರಂಭ ಆಗಿದೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ 3 ಕಾರ್ಯಾಧ್ಯಕ್ಷ ಸ್ಥಾನ ಸಿದ್ದರಾಮಯ್ಯ ಹೊಸ ಗೇಮ್
Advertisement
ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ಇಂದು ನನ್ನನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು. pic.twitter.com/qfAn6X0XHf
— Siddaramaiah (@siddaramaiah) January 5, 2020
Advertisement
ಎಂಬಿಪಾಟೀಲ್ ಪರ ಸಿದ್ದರಾಮಯ್ಯ ಮತ್ತು ಬಣ ಬ್ಯಾಟಿಂಗ್ ಮಾಡ್ತಿರೋದು ಡಿಕೆ ಶಿವಕುಮಾರ್ ಅಧ್ಯಕ್ಷ ಕನಸಿಗೆ ತಣ್ಣೀರು ಹಾಕೋ ಆಗಿದೆ. ಹೀಗಾಗಿ ಸಿದ್ದರಾಮಯ್ಯ ಜೊತೆ ಶತ್ರುತ್ವ ಬೆಳೆಸಿಕೊಂಡಿದ್ದ ಡಿಕೆಶಿ ಮನೆಗೆ ಬಂದು ಲಾಬಿ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.