Connect with us

Bengaluru City

ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹ- ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಅರೆಸ್ಟ್

Published

on

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹದ ಹಿನ್ನಲೆಯಲ್ಲಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಅವರನ್ನು ಬಂಧಿಸಲಾಗಿದೆ.

ಭಾನುವಾರ ರಾತ್ರಿ ಕೆ.ಆರ್.ಪುರಂನಲ್ಲಿರುವ ನಿವಾಸದಿಂದಲೇ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಟ್ವಿಟರ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆನಂದ್ ಪ್ರಸಾದ್ ಬರೆದಿದ್ದರು. ಸದ್ಯ ಟ್ವಿಟರ್ ಬರಹ ಡಿಲೀಟ್ ಮಾಡಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 505 (1)(ಬಿ)(ನಕಲಿ ಸಂದೇಶ ರವಾನೆ), 505(1) (ಅ), 153(ಕೋಮು ಸಂಘರ್ಷಕ್ಕೆ ಪ್ರೇರೇಪಣೆ) ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

Click to comment

Leave a Reply

Your email address will not be published. Required fields are marked *