ಶಿವಮೊಗ್ಗ: ಆರಗ ಜ್ಞಾನೇಂದ್ರ ಇಡೀ ರಾಜ್ಯಕ್ಕೆ ಗೃಹ ಮಂತ್ರಿಯಲ್ಲ, ಬದಲಿಗೆ ಜ್ಞಾನೇಂದ್ರ ಅವರು ಕೇವಲ ತೀರ್ಥಹಳ್ಳಿಗೆ ಮಾತ್ರ ಗೃಹ ಸಚಿವರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಕಿಡಿಕಾರಿದ್ದಾರೆ.
Advertisement
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆರಗ ಜ್ಞಾನೇಂದ್ರ ಅವರು ಗೃಹ ಸಚಿವರಾದಾಗ ನಾನು ಸಹ ಅವರಿಗೆ ಶುಭ ಹಾರೈಸಿದ್ದೆ. ನಾಲ್ಕು ಬಾರಿ ಶಾಸಕರಾಗಿದ್ದಾರೆ. ಅನುಭವಿಗಳು ಗೃಹ ಸಚಿವರಾಗಲು ಸಮರ್ಥರಿದ್ದಾರೆ ಅಂದುಕೊಂಡಿದ್ದೆ. ಆದರೆ ಮೈಸೂರಿನಲ್ಲಿ ನಡೆದ ರೇಪ್ ಪ್ರಕರಣದಲ್ಲಿಯೇ ಅವರ ಬಂಡವಾಳ ಗೊತ್ತಾಯ್ತು. ಗೃಹ ಸಚಿವ ಜ್ಞಾನೇಂದ್ರ ಅವರು ನೀಡಬೇಕಾದ ಹೇಳಿಕೆಯನ್ನು ಮುಖ್ಯಮಂತ್ರಿಗಳು, ಆರೋಗ್ಯ ಸಚಿವ ಡಾ.ಸುಧಾಕರ್ ಅವರು ನೀಡಿದರು ಎಂದರು. ಇದನ್ನೂ ಓದಿ: ಪರಿಷತ್ ಚುನಾವಣೆ- ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ
Advertisement
Advertisement
ಜ್ಞಾನೇಂದ್ರ ಅವರು ಗೃಹ ಸಚಿವರಾದ ಬಳಿಕ ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರೆಲ್ಲರೂ ಗೃಹ ಸಚಿವರಾಗಿದ್ದಾರೆ. ಬಿಜೆಪಿ ಕಾರ್ಯಕರ್ತರು ಅಧಿಕಾರಿಗಳನ್ನು ಹೆದರಿಸಿಕೊಂಡು ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾರೆ. ಆದರೆ ಗೃಹ ಸಚಿವರು ಮಾತ್ರ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ವಿನಾಃ ಕಾರಣ ಕ್ರಿಮಿನಲ್ ಕೇಸ್ ಹಾಕಿಸುತ್ತಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ಆರೋಪಿಸಿದರು.