ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಇನ್ನಿಲ್ಲ

Public TV
2 Min Read
DHRUVANARAYAN

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ (Dhruva Narayan) ಅವರು ಶನಿವಾರ ಮೃತಪಟ್ಟಿದ್ದಾರೆ.

ಧ್ರುವ ನಾರಾಯಣ್‌ (61) ಅವರು ಶನಿವಾರ ಹೃದಯಾಘಾತದಿಂದ ಮೈಸೂರಿನ (Mysuru) ಡಿಆರ್‌ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಇವರು ಬೆಂಗಳೂರಿನ (Bengaluru) ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಶಾಸಕ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

1983ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಧ್ರುವನಾರಾಯಣ್‌ 1984 ರಲ್ಲಿ ಜಿಕೆವಿಕೆಯ ಎನ್‌ಎಸ್‌ಯುಐ ಅಧ್ಯಕ್ಷನಾಗಿ ಆಯ್ಕೆಯಾದರು. ನಂತರ 1986 ರಲ್ಲಿ ರಾಜ್ಯ ಯುವ ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆದರೆ 1999ರಲ್ಲಿ ಮೊದಲ ಬಾರಿಗೆ ಸಂತೆಮಾರಳ್ಳಿ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿ ಸೋಲನ್ನನುಭವಿಸಿದ್ದರು. ಆದರೆ 2004ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ 1 ಮತದ ಅಂತರದ ಗೆಲುವು ಸಾಧಿಸಿ ಇತಿಹಾಸವನ್ನು ಸೃಷ್ಟಿಸಿದ್ದರು. ಇದನ್ನೂ ಓದಿ: ಡಿಸ್ಕೌಂಟ್ ಸಮಯ ವಿಸ್ತರಣೆಯಾದ್ರೂ, ಟ್ರಾಫಿಕ್ ಫೈನ್ ಕಟ್ಟೋಕೆ ಆಸಕ್ತಿ ತೋರದ ವಾಹನ ಸವಾರರು

ನಂತರ 2008ರಲ್ಲಿ ಕೊಳ್ಳೆಗಾಲ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅದಾದ ಬಳಿಕ 2009 ಹಾಗೂ 2014 ರ ಲೋಕಸಭಾ ಚುನಾವಣೆಯಲ್ಲಿ ಸತತ ಗೆಲುವು ಸಾಧಿಸಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ್ದರು. ಆದರೆ ಸೋಲಿನ ಬಳಿಕವೂ ಪಕ್ಷದಲ್ಲಿ ಹಾಗೂ ಕ್ಷೇತ್ರದಲ್ಲಿ ಆ್ಯಕ್ಟೀವ್ ಆಗಿದ್ದರು.

ಸಂಸದರಾಗಿದ್ದ ವೇಳೆ ಅನುದಾನ ಬಳಕೆ ವಿಚಾರದಲ್ಲೂ ಧ್ರುವನಾರಾಯಣ್ ಉತ್ತಮ ಹೆಸರು ಪಡೆದಿದ್ದರು. ಚಾಮರಾಜನಗರ (Chamarajanagar) ಲೋಕಸಭಾ ಕ್ಷೇತ್ರದಲ್ಲಿ ಉತ್ತಮ ಹೆಸರು ಪಡೆದಿದ್ದರು. ವಿಧಾನಸಭಾ ಚುನಾವಣೆಗೆ ನಂಜನಗೂಡು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರು. ಈ ಬಾರಿ ಚುನಾವಣೆಯಲ್ಲಿ ನಂಜನಗೂಡು ಕಾಂಗ್ರೆಸ್‌ ಅಭ್ಯಥಿಯಾಗಿ ಸ್ಪರ್ಧಿಸುವವರಿದ್ದರು. ಈ ಹಿನ್ನೆಲೆಯಲ್ಲಿ ಮತದಾರರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದರು. ಇದನ್ನೂ ಓದಿ: ವೋಟಿಗಾಗಿ ಫ್ರೀ ಸ್ಕೀಂಗಳ ಆಮಿಷ- ಉಚಿತ ಸೈಟ್ ನೀಡಲು ಮುಂದಾದ ಬಿಜೆಪಿ ಟಿಕೆಟ್ ಆಕಾಂಕ್ಷಿ

Share This Article
Leave a Comment

Leave a Reply

Your email address will not be published. Required fields are marked *