ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ (Shivashankarappa Sahukar) ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದಾರೆ.
ಕೆಪಿಎಸ್‌ಸಿ ಹಗರಣ ಪ್ರಕರಣ ಸಂಬಂಧ 2ನೇ ಬಾರಿಗೆ ಶಿವಶಂಕರಪ್ಪ ಅವರ ಮನೆ ಮೇಲೆ ಇ.ಡಿ ದಾಳಿ ಮಾಡಿತ್ತು. ಅದರ ಬೆನ್ನಲ್ಲೇ ಅವರನ್ನು ಬಂಧಿಸಲಾಗಿದೆ. ಡಾಲರ್ಸ್ ಕಾಲೋನಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ಕೆಪಿಎಸ್‌ಸಿ ಸದಸ್ಯೆ ಗೀತಾ ಅವರನ್ನು ವಶಕ್ಕೆ ಪಡೆಯಲಾಗಿದೆ. ಅಭ್ಯರ್ಥಿಗಳ ಜೊತೆ ನೇರ ಸಂಪರ್ಕ ಹೊಂದಿದ್ದ ಆರೋಪ ಇವರ ಮೇಲಿತ್ತು. ಇದನ್ನೂ ಓದಿ: ಕೆಪಿಎಸ್‌ಸಿ ನೇಮಕಾತಿ ಹಗರಣ: ಹೈಕೋರ್ಟ್ ಎಸ್‌ಐಟಿ ತನಿಖೆ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ
ತಪ್ಪೊಪ್ಪಿಗೆ ಮಾಡಿಕೊಂಡಿದ್ದ ಇಬ್ಬರು ಅಭ್ಯರ್ಥಿಗಳ ಮನೆಯ ಮೇಲೂ ಇ.ಡಿ ದಾಳಿ ನಡೆಸಿದೆ. ಮತ್ತೊಮ್ಮೆ ಹೇಳಿಕೆ ಪಡೆದು ಬಂಧಿಸುವ ಸಾಧ್ಯತೆ ಇದೆ.
ಶಿವಶಂಕರಪ್ಪ ಸಂಬಂಧಿ ಸುಗುರೇಶ್ ಜಾಕಾ ತಪ್ಪೊಪ್ಪಿಗೆ ಮತ್ತು ಗ್ಯಾನೇಂದ್ರ ಹೇಳಿಕೆ ಆಧರಿಸಿ ದಾಳಿ ನಡೆಸಲಾಗಿತ್ತು. ನೇಮಕಾತಿಯಲ್ಲಿ ಅಕ್ರಮ ಮಾಡಲು ಸುಗುರೇಶ್ ಜಾಕಾಗೆ ಶಿವಶಂಕರಪ್ಪ ಸೂಚಿಸಿದ್ದರು. ಹೀಗಾಗಿ, ಶಿವಶಂಕರಪ್ಪಗೆ ಅಕ್ರಮದ ಬಗ್ಗೆ ಮೊದಲೇ ಗೊತ್ತಿತ್ತು ಎಂದು ಇ.ಡಿ ವಾದವಾಗಿದೆ. ಇದನ್ನೂ ಓದಿ: ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

