ಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಇಂದು ಸಿಐಡಿ (CID) ಕಚೇರಿಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ಗ್ಯಾನೇಂದ್ರ ಅವರು ನಿನ್ನೆಯೇ (ಆ.27) ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ನಿನ್ನೆ ವಿಚಾರಣೆಗೆ ಗೈರಾಗಿದ್ದರು. ಇಂದು (ಆ.28) ವಿಚಾರಣೆಗೆ ಹಾಜರಾಗುವುದಾಗಿ ಮಾಹಿತಿ ಲಭ್ಯವಿದ್ದು, ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಸಿಐಡಿ ಕಚೇರಿಗೆ ಆಗಮಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇ, ಹೆದ್ದಾರಿ ಕಾಮಗಾರಿಗಳ ಮೇಲೆ ಮೂರನೇ ಕಣ್ಣು – ರಸ್ತೆ ಆಡಿಟ್‌ಗೆ EIL ನಿಯೋಜನೆ
ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪರೀಕ್ಷಾ ನಿಯಂತ್ರಕರಾಗಿದ್ದ ಗ್ಯಾನೇಂದ್ರ ಕುಮಾರ್ ಅವರ ಅವಧಿಯಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ ನಡೆದಿತ್ತು. ಈ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪವಿದ್ದು, ಈ ಸಂಬಂಧ ಸಿಐಡಿ ತನಿಖಾ ತಂಡವು ಗ್ಯಾನೇಂದ್ರ ಕುಮಾರ್ ಅವರನ್ನು ವಿಚಾರಣೆ ನಡೆಸಲಿದೆ.
