ಬೆಂಗಳೂರು: ರ್ನಾಟಕ ಲೋಕಸೇವಾ ಆಯೋಗ(KPSC) ನಡೆಸಿರು ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ಅಪರಾಧ ತನಿಖಾ ಇಲಾಖೆ (CID) ಅಧಿಕಾರಿಗಳು 329 ಅಭ್ಯರ್ಥಿಗಳಿಗೆ ಏಕಾಏಕಿ ನೋಟಿಸ್ (Notice) ಜಾರಿ ಮಾಡಿದ್ದಾರೆ.
ಜಾರಿ ನಿರ್ದೇಶನಾಲಯದ (ED) ಮುಂದೆ ಕೆಲವರು ಅಕ್ರಮ ನಡೆಸಿರುವುದಾಗಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ ಬೆನ್ನಲ್ಲೇ ಸಿಐಡಿ ಈ ಮಹತ್ವದ ಕ್ರಮ ಕೈಗೊಂಡಿದೆ.
ನೋಟಿಸ್ ಪಡೆದಿರುವ ಎಲ್ಲಾ 329 ಅಭ್ಯರ್ಥಿಗಳು ಇಂದೇ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇಡಿ ನಡೆಸಿದ ಪ್ರತ್ಯೇಕ ವಿಚಾರಣೆ ವೇಳೆ ಲಭ್ಯವಾದ ಮಹತ್ವದ ಮಾಹಿತಿ ಮತ್ತು ತಪ್ಪೊಪ್ಪಿಗೆ ಹೇಳಿಕೆಗಳನ್ನು ಆಧರಿಸಿ ಸಿಐಡಿ ಅಧಿಕಾರಿಗಳು ಈ ಜಾಲವನ್ನು ಮತ್ತಷ್ಟು ಆಳವಾಗಿ ತನಿಖೆ ನಡೆಸಲು ಮುಂದಾಗಿದ್ದಾರೆ.
ಇಷ್ಟೊಂದು ದೊಡ್ಡ ಸಂಖ್ಯೆಯ ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ನೋಟಿಸ್ ನೀಡಿರುವುದು ಪ್ರಕರಣದಲ್ಲಿ ಸಂಚಲನ ಮೂಡಿಸಿದ್ದು, ಅಕ್ರಮದಲ್ಲಿ ಭಾಗಿಯಾದ ಪ್ರಭಾವಿಗಳಿಗೂ ತನಿಖೆಯ ಬಿಸಿ ತಟ್ಟುವ ಸಾಧ್ಯತೆಯಿದೆ. ಇದನ್ನೂ ಓದಿ: ಟಿಪ್ಪು ಕಟೌಟ್‌ಗೆ ಪಾಕ್ ಸೇನೆ ಹಾಡಿನ ರೀಲ್ಸ್ – ಆರೋಪಿಗೆ 14 ದಿನ ನ್ಯಾಯಾಂಗ ಬಂಧನ
ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಗೋಲ್‌ಮಾಲ್‌ಗೆ ಸಂಬಂಧಿಸಿದಂತೆ ಅಧಿಕಾರಿಗಳು ಅಭ್ಯರ್ಥಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದು, ಮತ್ತಷ್ಟು ಸ್ಫೋಟಕ ಸತ್ಯಗಳು ಹೊರಬೀಳುವ ನಿರೀಕ್ಷೆಯಿದೆ.
