ಬೆಂಗಳೂರು: ಕೆಪಿಎಸ್ಸಿ ನೇಮಕಾತಿ ಹಗರಣಕ್ಕೆ (KPSC Scam) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ವಿಧಾನಸೌಧ ಪೊಲೀಸರಿಗೆ (Vidhana Soudha Police) ದೂರು ನೀಡಿದೆ.
ಈಗಾಗಲೇ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೂ (SIT) ಇಡಿ ದೂರು ನೀಡಿದೆ. ಹೈಕೋರ್ಟ್ ಆದೇಶದ ಮೇರೆಗೆ ಇಡಿ ಈ ದೂರು ಸಲ್ಲಿಸಿದೆ. ಪಿಎಂಎಲ್ಎ ಕಾಯ್ದೆಯ ಸೆಕ್ಷನ್ 66(2) ಅಡಿಯಲ್ಲಿ ದೂರು ದಾಖಲಿಸಲು ಹೈಕೋರ್ಟ್ ಸೂಚಿಸಿತ್ತು. ಇದನ್ನೂ ಓದಿ: ಭೂ ಕಬಳಿಕೆ ಆರೋಪ – ಮಾಜಿ ಸಚಿವ ಪ್ರಭು ಚೌಹಾಣ್ಗೆ ನೋಟಿಸ್ ಜಾರಿ
ಇಡಿ ನೀಡಿರುವ ದೂರನ್ನು ಸ್ವೀಕರಿಸಿರುವ ವಿಧಾನಸೌಧ ಪೊಲೀಸರು, ಮುಂದಿನ ಕ್ರಮ ಕೈಗೊಳ್ಳುವ ಮೊದಲು ಕಾನೂನು ಸಲಹೆ ಪಡೆಯಲು ಮುಂದಾಗಿದ್ದಾರೆ. ಈ ಸಂಬಂಧ ಅಡ್ವೊಕೇಟ್ ಜನರಲ್ ಕಚೇರಿಗೆ ದೂರನ್ನು ಕಳುಹಿಸಿ ಸಲಹೆ ಪಡೆಯಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಮಕ್ಕಳಂತೆ ಬೆಳೆಸಿದ ತೋಟ ಹೋಯ್ತು, ನನ್ನನ್ನೂ ಆನೆಗಳು ತುಳಿದು ಸಾಯಿಸಲಿ – ತೋಟದಲ್ಲಿ ಕುಳಿತು ರೈತನ ಕಣ್ಣೀರು
ಈಗಾಗಲೇ ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಇಡಿ ಆರೋಪ ಮಾಡಿದೆ. ಹೀಗಾಗಿ ಎಫ್ಐಆರ್ ದಾಖಲಿಸುವ ವಿಚಾರದಲ್ಲಿ ಪೊಲೀಸರು ತರಾತುರಿ ಮಾಡದೆ ಕಾನೂನು ಸಲಹೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಆಶಾಗಳ ಸೇವೆ ಇಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತೆ: ಆರೋಗ್ಯ ಸಚಿವರ ಬೇಜವಾಬ್ದಾರಿ ಹೇಳಿಕೆ
ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಆರೋಪ ಮಾಡಲಾಗಿತ್ತು. ಪ್ರತ್ಯೇಕವಾಗಿ ಎಫ್ಐಆರ್ ದಾಖಲಾದರೆ ಇಡಿ ತನಿಖೆ ಆರಂಭಿಸಲಿದೆ. ಸದ್ಯ ಎಫ್ಐಆರ್ ದಾಖಲಾಗುವುದನ್ನೇ ಇಡಿ ಕಾಯುತ್ತಿದೆ. ಇದನ್ನೂ ಓದಿ: ಸರ್ಕಾರವನ್ನು ಹೆದರಿಸುವ ಕೆಲಸ ಮಾಡಬಾರದು – ಪ್ರತಿಭಟನೆ ಕೈಬಿಡುವಂತೆ `ಆಶಾ’ಗಳಿಗೆ ಸಿಎಂ ಮನವಿ
