ಕಲಬುರಗಿ: ಕೆಪಿಎಸ್‌ಸಿ ನೇಮಕಾತಿ (KPSC Scam) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿನ ಅಭ್ಯರ್ಥಿ ಮನೆ ಮೇಲೆ ಸಿಐಡಿ (CID) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪಶುವೈದ್ಯ ನೇಮಕಾತಿ ಅಭ್ಯರ್ಥಿ ಮಮತಾ ಮನೆ ಮೇಲೆ ಸಿಐಡಿ ದಾಳಿ ನಡೆದಿದೆ. ಕಲಬುರಗಿ ನಗರದ ನ್ಯೂ ಓಜಾ ಲೇಔಟ್‌ನಲ್ಲಿರುವ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಇದನ್ನೂ ಓದಿ: ಕೆಪಿಎಸ್‌ಸಿ ಹಗರಣದ ವಿರುದ್ಧ ದೂರು ಕೊಟ್ಟ ಅಭ್ಯರ್ಥಿಗೆ ಅನಾಮಿಕನಿಂದ ಬೆದರಿಕೆ
ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಕಡೆಯಂದ ಅಭ್ಯರ್ಥಿ ಮಮತಾ ನೇಮಕವಾಗಿದ್ದರು. ಶಾಂತಾ ಹೊಸಮನಿ ಮೂಲಕ ಡೀಲ್ ಮಾಡಿ ನೇಮಕವಾಗಿದ್ದತ್ತು.
ಸಿಐಡಿ ಬೆಂಗಳೂರು ಡಿವೈಎಸ್‌ಪಿ ಹಾಗೂ ಕಲಬುರಗಿ ಡಿವೈಎಸ್‌ಪಿ ಅಸ್ಲಾಂ ಪಾಷಾ ನೇತೃತ್ವದ ತಂಡದಿಂದ ದಾಳಿ ನಡೆದಿದೆ. ಇದನ್ನೂ ಓದಿ: ಕೆಪಿಎಸ್‌ಸಿ ಅಕ್ರಮ: ಪರೀಕ್ಷೆಗೆ ಮೊದಲೇ 24 ಅಭ್ಯರ್ಥಿಗಳಿಂದ 12 ಕೋಟಿ ವಸೂಲಿ
